More

    ಮಹರ್ಷಿ ಭಗೀರಥರ ಭಾವಚಿತ್ರ ಮೆರವಣಿಗೆ

    ಚಾಮರಾಜನಗರ :ನಗರದ ಉಪ್ಪಾರ ಬೀದಿಯಲ್ಲಿ ಟೌನ್ ಉಪ್ಪಾರ ಸಂಘದ ವತಿಯಿಂದ ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ಮಂಗಳವಾರ ಆಚರಿಸಲಾಯಿತು.

    ನಗರದ ಸಂಘದ ಕಚೇರಿಯಲ್ಲಿ ಭಗೀರಥರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಲಾಯಿತು. ನಂತರ ತೆರೆದ ವಾಹನದಲ್ಲಿ ಭಗೀರಥರ ಭಾವಚಿತ್ರವಿಟ್ಟು ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ರಾಚಶೆಟ್ಟಿ ಮಾತನಾಡಿ, ಪ್ರತಿ ವರ್ಷದಂತೆ ಈ ಬಾರಿಯು ಸಂಘದ ವತಿಯಿಂದ ಮಹರ್ಷಿ ಭಗೀರಥ ಜಯಂತಿ ಆಚರಿಸಲಾಗುತ್ತಿದೆ. ಮಹರ್ಷಿ ಭಗೀರಥರ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಂಡು ಸಮಾಜದ ಅಭಿವೃದ್ಧಿಯಲ್ಲಿ ತೊಡಗೋಣ ಎಂದರು.

    ಸಮುದಾಯದ ಮೂಲ ಪುರುಷರಾದ ಮಹರ್ಷಿ ಭಗೀರಥರು ಕಠಿಣ ತಪಸ್ಸು ಮಾಡುವ ಮೂಲಕ ಧರೆಗೆ ಗಂಗೆಯನ್ನು ತಂದರು. ಅವರ ಪ್ರಯತ್ನದ ಹಾದಿಯಲ್ಲಿ ಸಾಗುವ ಮೂಲಕ ಸಮುದಾಯ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡುವ ಮೂಲಕ ಸಮಾಜ ಮಕ್ಕಳನ್ನು ಅಕ್ಷರವಂತರನ್ನಾಗಿ ಮಾಡಬೇಕು ಎಂದರು.

    ಕಾರ್ಯಕ್ರಮದಲ್ಲಿ ಟೌನ್ ಉಪ್ಪಾರ ಸಂಘದ ಉಪಾಧ್ಯಕ್ಷ ಯೋಗೇಶ್, ಕಾರ್ಯದರ್ಶಿ ರಮೇಶ್, ಸಹ ಕಾರ್ಯದರ್ಶಿ ಮಹದೇವಪ್ರಸಾದ್, ಸಂಘಟನಾ ಕಾರ್ಯದರ್ಶಿ ಮಹದೇವ, ಖಜಾಂಚಿ ಕುಮಾರ್, ಕಾರ್ಯಕಾರಿಣಿ ಸಮಿತಿ ಸದಸ್ಯ ಸುರೇಶ್, ರಾಜೇಂದ್ರ, ರಾಜು, ಸುರೇಶ್ ಜಿಮ್, ಮಹದೇವಸ್ವಾಮಿ, ರಾಮುಕುಮಾರ್, ರಮೇಶ್, ಗಿರಿ, ರಾಘವೇಂದ್ರ, ಶಿವು, ಪುಟ್ಟಣ್ಣ ಶಿವಕುಮಾರ್, ಪುನೀತ್, ಅಜಯ್, ಗಿರಿ, ಸುರೇಶ್, ರಮೇಶ್ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts