More

  ಹೆಚ್ಚುವರಿ ಬಸ್ ಸೇವೆ ಒದಗಿಸಲು ಮನವಿ

  ಚಾಮರಾಜನಗರ: ವಿದ್ಯಾರ್ಥಿಗಳು ಹಾಗೂ ಪ್ರಾಯಣಿಕರಿಗಾಗಿ ಮೈಸೂರಿನಿಂದ ಚಾಮರಾಜನಗರಕ್ಕೆ ಹಾಗೂ ಚಾಮರಾಜನಗರದಿಂದ ಮೈಸೂರಿಗೆ ಬೆಳಗ್ಗೆ ಹಾಗೂ ಸಂಜೆ ಸಮಯದಲ್ಲಿ ಹೆಚ್ಚುವರಿ ಬಸ್‌ಸೇವೆ ಒದಗಿಸಬೇಕೆಂದು ಕರ್ನಾಟಕ ಸೇನಾಪಡೆ ಕಾರ್ಯಕರ್ತರು ಮನವಿ ಸಲ್ಲಿಸಿದರು.

  ಕೆಎಸ್‌ಆರ್‌ಟಿಸಿ ಅಧೀಕ್ಷಕ ವಿನಾಯಕ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಕರ್ನಾಟಕ ಸರ್ಕಾರ ಮಹಿಳಾ ಪ್ರಯಾಣಿಕರಿಗೆ ಉಚಿತ ಬಸ್ ಸೇವೆ ನೀಡಿರುವುದು ಸ್ವಾಗತಾರ್ಹ. ಇದರ ಜತೆಗೆ ಬೆಳಗ್ಗೆ ಹಾಗೂ ಸಂಜೆ ಸಮಯದಲ್ಲಿ ಬಸ್‌ಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳು ತುಂಬಾ ತೊಂದರೆ ಅನುಭವಿಸುವಂತಾಗಿದೆ ಎಂದರು.

  ಬಹಳ ದಿನಗಳಿಂದಲೂ ಈ ಸಮಸ್ಯೆಯಿದ್ದು, ಮೈಸೂರಿನಿಂದ ಚಾಮರಾಜನಗರಕ್ಕೆ ಹಾಗೂ ಚಾಮರಾಜನಗರದಿಂದ ಮೈಸೂರಿಗೆ ಬೆಳಗ್ಗೆ ಹಾಗೂ ಸಂಜೆ ಸಮಯದಲ್ಲಿ ಹೆಚ್ಚುವರಿ ಬಸ್‌ಸೇವೆ ನೀಡುವ ಮೂಲಕ ಪ್ರಯಾಣಿಕರಿಗೆ ಅನುಕೂಲಮಾಡಿಕೊಡಬೇಕೆಂದು ಮನವಿ ಮಾಡಿದರು. ಚಾ.ರಂ.ಕುಮಾರ್, ಆಟೋ ನಾಗೇಶ್, ಗು.ಪುರುಷೋತ್ತಮ್, ಪಣ್ಯದಹುಂಡಿ ರಾಜು, ನಂಜುಂಡಶೆಟ್ಟಿ, ಸಾಗರ್ ರಾವತ್, ಬದನಗುಪ್ಪೆ ಮಹೇಶ್, ಸುರೇಶ್, ಮೂಡ್ಲುಪುರ ಪ್ರಕಾಶ್ ಮತ್ತು ಇತರರು ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts