More

    ಓಪಿಎಸ್ ಜಾರಿಗೆ ಸರ್ಕಾರ ಬದ್ಧ

    ಚಾಮರಾಜನಗರ: ಸರ್ಕಾರಿ ನೌಕರರ ಹಳೆ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೆ ಸರ್ಕಾರ ಬದ್ಧವಾಗಿದೆ ಎಂದು ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಹೇಳಿದರು.

    ರಾಜ್ಯದಲ್ಲಿ ಸರ್ಕಾರಿ ನೌಕರರ ಹೊಸ ಪಿಂಚಣಿ ಯೋಜನೆಯನ್ನು ತೆಗೆದುಹಾಕಿ ಹಳೆ ಪಿಂಚಣಿ ಜಾರಿಗೆ ತರುವಂತೆ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿತ್ತು. ಅದರಂತೆ ಈಗಾಗಲೇ ದೇಶದಲ್ಲಿ ಯಾವ ರಾಜ್ಯಗಳು ಒಪಿಎಸ್ ಗೆ ಮರಳಿದೆ ಆ ರಾಜ್ಯಗಳಲ್ಲಿ ಅಧ್ಯಯನ ಮಾಡಬೇಕು ಎನ್ನುವ ಉದ್ದೇಶದಿಂದ ಉನ್ನತ ಮಟ್ಟದ ಸಮಿತಿಯನ್ನು ರಚನೆ ಮಾಡಲಾಗಿದೆ. ಈ ಸಂಬಂಧ ಮುಖ್ಯಮಂತ್ರಿಗಳು ಸದನದಲ್ಲಿ ಹೇಳಿದ್ದಾರೆ. ಒಪಿಎಸ್ ಜಾರಿಗೆ ಸರ್ಕಾರ ಬದ್ಧವಾಗಿದೆ ಎಂದು ಮಂಗಳವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಹೇಳಿದರು.

    ವಿಧಾನ ಪರಿಷತ್ ಅನ್ನು ಚಿಂತಕರ ಚಾವಡಿ ಎಂದು ಕರೆಯಲಾಗುತ್ತದೆ. ಅಧಿಕಾರಕ್ಕೆ ಬಂದ ಪಕ್ಷಗಳಿಂದ ನಾಮಕರಣ ಮಾಡುತ್ತೇವೆ. ವಿಧಾನ ಪರಿಷತ್ ನಲ್ಲಿ ಇಂದಿಗೂ ಉತ್ತಮವಾಗಿ ಕೆಲಸ ಮಾಡುವವರು ಇದ್ದಾರೆ. ಹಿಂದೆ ಇದ್ದ ಘನತೆ ಗೌರವಕ್ಕೆ ಈಗ ಒಂದಿಷ್ಟು ಚ್ಯುತಿ ಬಂದಿರಬಹುದು ಎಂದು ವಿಷಾದ ವ್ಯಕ್ತಪಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts