More

    ಮಕ್ಕಳನ್ನು ಶಾಲೆಗೆ ಕಳುಹಿಸಲ್ಲ

    ಹನೂರು: ನಮ್ಮ ಮೆಂದಾರೆ ಗ್ರಾಮದ ಎಂಟತ್ತು ಮಕ್ಕಳು ಇಂಡಿಗನತ್ತ ಗ್ರಾಮದ ಶಾಲೆಯಲ್ಲಿ ಓದುತ್ತಿದ್ದಾರೆ. ಮತಗಟ್ಟೆ ಧ್ವಂಸ, ಹಲ್ಲೆ ನಡೆದ ಮೇಲೆ ಅಲ್ಲಿನ ಶಾಲೆಗೆ ಮಕ್ಕಳನ್ನು ಕಳುಹಿಸಲು ಭಯವಾಗುತ್ತಿದೆ ಎಂದು ಮೆಂದಾರೆ ಗ್ರಾಮಸ್ಥೆ ಲಕ್ಷ್ಮಮ್ಮ ಹೇಳಿದರು.

    ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಇಂಡಿಗನತ್ತ ಗ್ರಾಮದಲ್ಲಿ ಲೋಕಸಭೆ ಚುನಾವಣೆ ಮತದಾನದ ದಿನ ನಡೆದ ಮತಗಟ್ಟೆ ಧ್ವಂಸ ಪ್ರಕರಣದ ಪರಿಣಾಮದ ಕುರಿತು ವಿಜಯವಾಣಿಯೊಂದಿಗೆ ಅವರು ಮಾತನಾಡಿದರು. ಈ ಹಿನ್ನೆಲೆಯಲ್ಲಿ ಶಾಲೆ ಆರಂಭಗೊಂಡರೂ ನಾವು ಅವರನ್ನು ಕಳುಹಿಸಬಾರದೆಂದು ನಿರ್ಧಾರ ಮಾಡಿದ್ದೇವೆ. ಅಲ್ಲದೇ, ನಾವು ನಮ್ಮ ಮಕ್ಕಳನ್ನು ಶಾಲೆಯಲ್ಲಿ ನೀಡುವ ಬಿಸಿಯೂಟ ಸೇವಿಸುವುದಕ್ಕೂ ಕಳುಹಿಸುತ್ತಿಲ್ಲ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts