More

    ವೇದಿಕೆ ಹಂಚಿಕೊಂಡ ಬಾಲರಾಜ್ ಮತ್ತು ಡಾ.ಮೋಹನ್

    ಚಾಮರಾಜನಗರ: ಲೋಕಸಭಾ ಚುನಾವಣೆ ಆದ ಬಳಿಕ ಮೊದಲಬಾರಿಗೆ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಡಾ.ಮೋಹನ್ ಅವರು ಬಿಜೆಪಿ ಲೋಕಸಭಾ ಅಭ್ಯರ್ಥಿ ಎಸ್.ಬಾಲರಾಜ್ ಅವರೊಂದಿಗೆ ನುಡಿನಮನ ಕಾರ್ಯಕ್ರಮದಲ್ಲಿ ವೇದಿಕೆ ಹಂಚಿಕೊಂಡರು.

    ಲೋಕಸಭಾ ಚುನಾವಣೆಯಲ್ಲಿ ಪ್ರಬಲ ಟಿಕೆಟ್ ಆಕಾಂಕ್ಷೆಯಾಗಿದ್ದ ಡಾ.ಮೋಹನ್ ಅವರಿಗೆ ಕೊನೆಯ ಕ್ಷಣದಲ್ಲಿ ಟಿಕೆಟ್ ಕೈತಪ್ಪಿತ್ತು. ಬಳಿಕ ಅವರು ಕಾಂಗ್ರೆಸ್ ಪಕ್ಷಕ್ಕೆ ಹೋಗುತ್ತಾರೆ ಎಂಬ ಮಾತುಗಳು ಸಹ ಕೇಳಿಬಂದಿತ್ತು. ಈ ಕ್ಷಣದವರೆಗೂ ಡಾ.ಮೋಹನ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬಂದಿತ್ತು. ಆದರೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ವಿ.ಶ್ರೀನಿವಾಸ್‌ಪ್ರಸಾದ್ ನುಡಿನಮನ ಕಾರ್ಯಕ್ರಮ ಇಂತಹ ಮಾತುಗಳಿಗೆ ತೆರೆ ಎಳೆಯಿತು. ಈ ಸಂದರ್ಭದಲ್ಲಿ ನಂಜನಗೂಡು ಮಾಜಿ ಶಾಸಕ ಹರ್ಷವರ್ಧನ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts