More

    ಸುಳ್ವಾಡಿ ಸಂತ್ರಸ್ಥರಿಗೆ ಪೌಷ್ಠಿಕ ಆಹಾರ ವಿತರಣೆ

    ಹನೂರು: ತಾಲೂಕಿನ ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮನ ದೇಗುದಲ್ಲಿ ವಿಷ ಪ್ರಸಾದ ಸೇವನೆ ದುರಂತ ಪ್ರಕರಣದಲ್ಲಿ ಬಾಧಿತರಾದ ಸಂತ್ರಸ್ಥರಿಗೆ ಸೋಮವಾರ ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ಪೌಷ್ಠಿಕ ಆಹಾರ ಪದಾರ್ಥಗಳನ್ನು ವಿತರಿಸಲಾಯಿತು.

    ಈ ವೇಳೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಮಾತನಾಡಿ, ವಿಷ ಪ್ರಸಾದ ದುರಂತ ಪ್ರಕರಣದಿಂದ 17 ಜನರು ಮೃತಪಟ್ಟಿದ್ದರು. 100ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿ ಚಿಕಿತ್ಸೆ ಪಡೆದುಕೊಂಡು ಮನೆಯಲ್ಲಿದ್ದರು. ಅವರಿಗೆ ಆಗಾಗ ಅನಾರೋಗ್ಯ ಕಾಡಿ ನಿಶಕ್ತಿಯಿಂದ ಬಳಲುತ್ತಿದ್ದು, ಆರೋಗ್ಯ ಇಲಾಖೆಯಿಂದ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ಆದರೂ ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಸಾಧ್ಯವಾಗಿಲ್ಲ. ಇದನ್ನು ತಿಳಿದ ಜಿಲ್ಲಾಧಿಕಾರಿ ಅವರು ಆದಿವಾಸಿ ಕುಟುಂಬಗಳಿಗೆ ನೀಡುವ ಪೌಷ್ಠಿಕ ಆಹಾರ ಪದಾರ್ಥವನ್ನು ರೋಗಬಾಧಿತ ಸಂತ್ರಸ್ಥರಿಗೂ ನೀಡಬೇಕು ಎಂದು ಸೂಚನೆ ನೀಡಿದ್ದರು. ಈ ದೆಸೆಯಲ್ಲಿ 110 ಕುಟುಂಬಗಳಿಗೂ ಪೌಷ್ಠಿಕ ಆಹಾರ ಪದಾರ್ಥವನ್ನು ವಿತರಿಸಲಾಗಿದೆ. ಸಂತ್ರಸ್ಥರ ಬಗ್ಗೆ ವಿಶೇಷ ಕಾಳಜಿಯನ್ನು ಹೊಂದಿದ್ದಾರೆ ಎಂದರು.


    ಇನ್ನು ಪ್ರಕರಣದಲ್ಲಿ ಮೃತಪಟ್ಟ ಪರಿಶಿಷ್ಟ ಜಾತಿಯ 11 ಕುಟುಂಬದ ಸದಸ್ಯರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡಲಾಗಿದೆ. ಜತೆಗೆ ನಿವೇಶನದ ಹಕ್ಕು ಪತ್ರವನ್ನು ನೀಡುವ ಬಗ್ಗೆಯೂ ಚರ್ಚೆ ನಡೆದಿದೆ ಎಂದು ತಿಳಿಸಿದರು. ಈ ವೇಳೆ ತಾಲೂಕು ಸಮಾಜ ಕಲ್ಯಾಣಾದಿಕಾರಿ ಕೇಶವಮೂರ್ತಿ ಹಾಗೂ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts