More

    ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ

    ಚಾಮರಾಜನಗರ: ಹನೂರು ತಾಲೂಕಿನ ಮಂಗಲದ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ 2024-25ನೇ ಸಾಲಿಗೆ ಪ್ರಥಮ ಪಿ.ಯು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದ ಪ್ರವೇಶಕ್ಕೆ ಪರಿಶಿಷ್ಟ ಪಂಗಡದ ಸೋಲಿಗ, ಅಲೆಮಾರಿ, ಅರೆ ಅಲೆಮಾರಿ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    ಸದರಿ ವಸತಿ ಶಾಲೆಯಲ್ಲಿ ಅರ್ಜಿ ಪಡೆದು ಮೇ 27ರೊಳಗೆ ಭರ್ತಿ ಮಾಡಿ, ಅಗತ್ಯ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಬೇಕು. ವಿದ್ಯಾರ್ಥಿಗಳ ಆಯ್ಕೆಯನ್ನು ಮೆರಿಟ್ ಆಧಾರದ ಮೇಲೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕೆ.ಮಂಜುಳಾ( ಮೊ.ಸಂ.9535341263), ಏಕಲವ್ಯ ಮಾದರಿ ವಸತಿ ಶಾಲೆಯ ಪ್ರಾಂಶುಪಾಲ ತಾರಾನಾಥ (ಮೊ.ಸಂ.9611608945) ಅವರನ್ನು ಸಂಪರ್ಕಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts