More

    ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

    ಚಾಮರಾಜನಗರ: ತಾಲೂಕಿನ ಕಿಲಗೆರೆ-ಯಾನಗಹಳ್ಳಿ ಗ್ರಾಮಕ್ಕೆ ಸಂಪರ್ಕಕಲ್ಪಿಸುವ ರಸ್ತೆ ಬದಿಯ ವಿದ್ಯುತ್ ಕಂಬಗಳು ರಾತ್ರಿ ಸುರಿದ ಭಾರಿ ಮಳರಯಿಂದಾಗಿ ಧರೆಗೆ ಉರುಳಿದ್ದವು.

    ಯಾನಗಹಳ್ಳಿ ವಿದ್ಯುತ್ ಪ್ರಸರಣ ನಿಗಮದಿಂದ ಕಿಲಗೆರೆ ಸೇರಿದಂತೆ ಇನ್ನಿತರೆ ಗ್ರಾಮಗಳಿಗೆ ನಿರಂತರ ಜ್ಯೋತಿ ಕಲ್ಪಿಸುವ ಸಂಪರ್ಕ ಇದಾಗಿದೆ. ಮಂಗಳವಾರ ರಾತ್ರಿ ಸುರಿದ ಮಳೆಗೆ ರಸ್ತೆ ಬದಿಯಲ್ಲಿರುವ ಮೂರಕ್ಕೂ ಹೆಚ್ಚು ಕಂಬಗಳು ನೆಲಕ್ಕೆ ಉರುಳಿದ್ದು ಗ್ರಾಮಗಳಿಗೆ ವಿದ್ಯುತ್ ಸಂಪರ್ಕವಿಲ್ಲದೇ ಸಾರ್ವಜನಿಕರು ದಿನವಿಡೀ ಸಮಸ್ಯೆ ಅನುಭವಿಸುವಂತಾಯಿತು. ಕುಡಿಯುವ ನೀರು ಹಾಗೂ ಇನ್ನಿತರೆ ಕೆಲಸ ಕಾರ್ಯಗಳಿಗೆ ವಿದ್ಯುತ್ ಸಂಪರ್ಕವಿಲ್ಲದೇ ಜನರು ಪರದಾಡಿದರು.

    ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನ ವೆಂಕಟಯ್ಯನಛತ್ರ ಮತ್ತು ನಗರದ ಮೂಡ್ಲುಪುರ ಬಡಾವಣೆಯ ಮನೆಗಳಿಗೆ ಮಳೆನೀರು ನುಗ್ಗಿ ನಿವಾಸಿಗಳು ಸಮಸ್ಯೆ ಅನುಭವಿಸುವಂತಾಯಿತು. ವೆಂಕಟಯ್ಯನಛತ್ರ ಗ್ರಾಮದ ಉಪ್ಪಾರ ಬಡಾವಣೆಯಲ್ಲಿ ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿರುವ ಸಿಸಿ ರಸ್ತೆ ಹಾಗೂ ಚರಂಡಿಯಿಂದಾಗಿ ಮಂಗಳವಾರ ಸುರಿದ ಮಳೆಗೆ ಚರಂಡಿ ನೀರು ಹಲವಾರು ಮನೆಗಳಿಗೆ ನುಗ್ಗಿ ನಿವಾಸಿಗಳು ಪರದಾಡುವಂತಾಯಿತು. ಮನೆಗಳಿಗೆ ನುಗ್ಗಿದ ಮಳೆಯ ನೀರನ್ನು ಹೊರಹಾಕಲು ಜನರು ಹರಸಾಹಸ ಪಡುವಂತಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts