More

    ನರೇಗಾ ಕಾಮಗಾರಿಯಲ್ಲಿ ಇಂಡಿಗನತ್ತ ಜನರು

    ಹನೂರು: ತಾಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಬುಧವಾರದಿಂದ ಕೈಗೊಂಡಿರುವ ಕೆರೆ ಅಭಿವೃದ್ಧಿ ಕಾಮಗಾರಿಯಲ್ಲಿ ಇಲ್ಲಿನ ಜನರು ಭಾಗಿಯಾಗುವ ಮೂಲಕ ಮತಗಟ್ಟೆ ಧ್ವಂಸ ಪ್ರಕರಣದಿಂದ ಹೊರ ಬಂದಿದ್ದಾರೆ.

    ಏ.26ರಂದು ಇಂಡಿಗನತ್ತ ಗ್ರಾಮದಲ್ಲಿ ನಡೆದ ಮತಗಟ್ಟೆ ದ್ವಂಸ ಪ್ರಕರಣದ ಸಂಬಂಧ 3 ಪ್ರತ್ಯೇಕ ದೂರು ದಾಖಲಾಗಿತ್ತು. ಈ ಹಿನ್ನೆಲೆ ಪೊಲೀಸರು ಮಹಿಳೆಯರು ಸೇರಿದಂತೆ 46 ಜನರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ನೀಡಿದ್ದರು. 5 ದಿನಗಳ ಹಿಂದೆ ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಜನಧ್ವನಿ ಬಿ.ವೆಂಕಟೇಶ್ ಅವರು ಬೇಡಗಂಪಣ ಸಮುದಾಯದ ಮುಖಂಡರ ಸಹಕಾರ ಪಡೆದು 46 ಜನರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಿದ್ದು, ಮನೆಯಲ್ಲಿಯೇ ಇದ್ದರು. ಪ್ರಕರಣದದಿಂದ ಚಿಂತೆಗೊಳಗಾಗಿದ್ದರು.

    ಜಿಪಂ ಸಿಇಒ ಆನಂದ್ ಪ್ರಕಾಶ್ ಮೀನಾ, ನರೇಗಾ ಯೋಜನೆಯಡಿ ಜನರಿಗೆ ಉದ್ಯೋಗ ನೀಡುವಂತೆ ಪಿಡಿಒ ಕಿರಣ್ ಅವರಿಗೆ ಸೂಚಿಸಿದ್ದರು. ಈ ಹಿನ್ನೆಲೆ ಬುಧವಾರದಿಂದ ಗ್ರಾಮದಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದ್ದು, ಇದರಲ್ಲಿ ಬಂಧನದಿಂದ ಬಿಡುಗಡೆಯಾದ ಐವರು ಮಹಿಳೆಯರು, ನಾಲ್ವರು ಪುರುಷರು ಸೇರಿದಂತೆ ಒಟ್ಟು 36 ಜನರು ಕೆಲಸದಲ್ಲಿ ಭಾಗಿಯಾಗಿದ್ದಾರೆ. ತಿಂಗಳಿಂದ ಪ್ರಕರಣದ ಚಿಂತೆಯಲ್ಲಿದ್ದ ಜನರು ನರೇಗಾ ಕೆಲಸದಲ್ಲಿ ಮಗ್ನರಾಗುವ ಮೂಲಕ ಕೊಂಚ ನೆಮ್ಮದಿ ಪಡೆದಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts