ಹನೂರು: ಅರಣ್ಯದಿಂದ ಹೊರ ಬಂದು ನಾಯಿಗಳ ದಾಳಿಗೆ ಸಿಲುಕಿದ್ದ ಜಿಂಕೆಯನ್ನು ತಾಲೂಕಿನ ಕಂಡಯ್ಯನಪಾಳ್ಯ ಗ್ರಾಮಸ್ಥರು ಭಾನುವಾರ ರಕ್ಷಿಸಿದ್ದಾರೆ.
ಸಮೀಪದ ಅರಣ್ಯ ಪ್ರದೇಶದಿಂದ ಬೆಳಗ್ಗೆ 7.30ರಲ್ಲಿ ಗ್ರಾಮಕ್ಕೆ ಬಂದ ಜಿಂಕೆಯನ್ನು ಬೀದಿ ನಾಯಿಗಳು ಅಟ್ಟಾಡಿಸಿಕೊಂಡು ದಾಳಿ ನಡೆಸುತ್ತಿದ್ದವು. ಈ ವೇಳೆ ಗ್ರಾಮಸ್ಥರು ನಾಯಿಗಳನ್ನು ಓಡಿಸಿ ಜಿಂಕೆಯನ್ನು ರಕ್ಷಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಗಾಯಗೊಂಡಿದ್ದ ಜಿಂಕೆಗೆ ಸೂಕ್ತ ಚಿಕಿತ್ಸೆ ನೀಡಿ ಅರಣ್ಯ ಪ್ರದೇಶಕ್ಕೆ ಬಿಟ್ಟರು.
TAGGED:chamarajanagara news