ಹನೂರು: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಜು.15 ರಂದು ನಡೆಯಲಿರುವ ಪತ್ರಿಕಾ ದಿನಾಚರಣೆ ಅಂಗವಾಗಿ ಭಾನುವಾರ ಪಟ್ಟಣದ ಶ್ರೀ ಮಹದೇಶ್ವರ ಕ್ರೀಡಾಂಗಣದಲ್ಲಿ ಸಂಘದ ಸದಸ್ಯರಿಗೆ ಕ್ರೀಡಾಕೂಟ ಆಯೋಜಿಸಿಲಾಗಿತ್ತು.
100 ಮೀ ಓಟ ಹಾಗೂ ತಟ್ಟೆ ಎಸೆತದಲ್ಲಿ ಮಹದೇವಸ್ವಾಮಿ ಪ್ರಥಮ, ಸುರೇಶ್ ದ್ವಿತೀಯ ಸ್ಥಾನ, ಗುಂಡು ಎಸೆತದಲ್ಲಿ ಸುರೇಶ್ ಪ್ರಥಮ, ಮಹದೇವಸ್ವಾಮಿ ದ್ವಿತೀಯ ಸ್ಥಾನ ಪಡೆದರು. ಕ್ರಿಕೆಟ್ ಪಂದ್ಯಾವಳಿಯಲ್ಲಿ ಮಹದೇಶ್ ನೇತೃತ್ವದ ತಂಡ ಪ್ರಥಮ ಸ್ಥಾನ ಹಾಗೂ ಸುರೇಶ್ ನಾಯಕತ್ವದ ತಂಡ ದ್ವಿತೀಯ ಸ್ಥಾನ ಗಳಿಸಿತು. ಲೊಕ್ಕನಹಳ್ಳಿ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಲಕ್ಷ್ಮಣ್ ತಾಳಿ ಕ್ರೀಡಾಕೂಟ ನಡೆಸಿಕೊಟ್ಟರು.
ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು, ಸದಸ್ಯರು ಇದ್ದರು.
TAGGED:chamarajanagara news