ಹನೂರು: ಪಟ್ಟಣ ಸಮೀಪದ ಬಟಗುಪ್ಪೆಯ ಶ್ರೀ ಚಾಮುಂಡೇಶ್ವರಿ ದೇಗುಲದಲ್ಲಿ ಸೋಮವಾರ ಚಾಮುಂಡೇಶ್ವರಿ ವರ್ಧಂತಿ ಅಂಗವಾಗಿ ವಿಶೇಷ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು.
ದೇಗುಲವನ್ನು ವಿವಿಧ ಪುಷ್ಪ, ತಳಿರು-ತೋರಣ ಹಾಗೂ ಮಾವಿನ ಕಾಯಿಯಿಂದ ಸಿಂಗರಿಸಲಾಗಿತ್ತು. ದೇವಿಗೆ ಎಳನೀರು, ಕುಂಕುಮ, ಜೇನುತುಪ್ಪ, ಪನ್ನೀರು, ಹಾಲು, ಮೊಸರು ಹಾಗೂ ಗಂಧದ ಅಭಿಷೇಕ ನೆರವೇರಿಸಲಾಯಿತು. ಮೂರ್ತಿಗೆ ವಿವಿಧ ಪುಷ್ಪಗಳಿಂದ ಸಿಂಗರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಪಂಚಾಮೃತ ಅಭಿಷೇಕ, ಧೂಪ, ದೀಪಧಾರತಿ, ಬೆಲ್ಲ, ನಿಂಬೆಹಣ್ಣಿನ ಆರತಿ ಹಾಗೂ ಮಹಾ ಮಂಗಳಾರತಿ ಬೆಳಗಲಾಯಿತು. ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು. ಭಕ್ತರಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ಅರ್ಚಕ ಬೆಟ್ಟೇಗೌಡ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು.
TAGGED:chamarajanagara news