More

  ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗದಿರಲಿ

  ಕೊಳ್ಳೇಗಾಲ: ಯಾವುದೇ ಮಗುವು ಶಿಕ್ಷಣದಿಂದ ವಂಚಿತವಾಗಬಾರದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷೆ ಸುನೀತಾ ಹೇಳಿದರು.

  ಪಟ್ಟಣದ ಮುಡಿಗುಂಡ ಆದರ್ಶ ವಿದ್ಯಾನಿಲಯದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ವಕೀಲರ ಸಂಘ, ಕಾರ್ಮಿಕ ಇಲಾಖೆ, ಆದರ್ಶ ವಿದ್ಯಾಲಯ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.

  ಬಾಲ ಕಾರ್ಮಿಕ ಪದ್ಧತಿ ಕಾನೂನಿಗೆ ವಿರುದ್ಧವಾಗಿದೆ. ಬಾಲಕರಿಂದ ಕೆಲಸ ಮಾಡಿಸಿಕೊಳ್ಳುತ್ತಿರುವುದು ಕಂಡುಬಂದರೆ ಕೂಡಲೇ ಕಾರ್ಮಿಕ ಇಲಾಖೆಗೆ ಅಥವಾ ಮಕ್ಕಳ ಸಹಾಯವಾಣಿ 1098ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕು. ಇದರಿಂದ ಶಿಕ್ಷಣದಿಂದ ದೂರವಾಗಿರುವ ಮಗುವಿನ ರಕ್ಷಣೆ ಮಾಡಿದಂತಾಗುತ್ತದೆ ಎಂದರು.

  ಆದರ್ಶ ವಿದ್ಯಾಲಯ ಮುಖ್ಯ ಶಿಕ್ಷಕಿ ಪ್ರಿಯದರ್ಶಿನಿ, ಪ್ರಧಾನ ಸಿವಿಲ್ ನ್ಯಾಯಾಧೀಶೆ ಎಂ. ಎನ್. ನಂದಿನಿ, ಕಾರ್ಮಿಕ ಇಲಾಕೆ ನಿರೀಕ್ಷಕ ಬಿ.ಎಲ್ ಪ್ರಸಾದ್, ವಕೀಲರ ಸಂಘದ ಅಧ್ಯಕ್ಷ ಸಿ.ರವಿ, ಉಪಾಧ್ಯಕ್ಷೆ ಸಿ.ಆರ್. ನಿರ್ಮಲಾ, ಕಾರ್ಯದರ್ಶಿ ಮಹೇಶ್ ಕುಮಾರ್, ಜಿಲ್ಲಾ ಬಾಲಕಾರ್ಮಿಕರ ಯೋಜನಾ ಸೊಸೈಟಿಯ ನಿರ್ದೇಶಕ ಎಂ.ಮಹೇಶ್ ಮತ್ತಿತರಿದ್ದರು.

  See also  ಬೆಟ್ಟಳ್ಳಿ ಮಾರಮ್ಮನಿಗೆ ವಿಶೇಷ ಪೂಜೆ, ಆರತಿ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts