More

  ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿ ವಿತರಣೆ

  ಹನೂರು; ನರಸೀಪುರದ ಪ್ರಸಾದ್, ಕೌದಳ್ಳಿಯ ಶ್ರೀಕಂಠ ಹಾಗೂ ಮೈಸೂರಿನ ಅವಿನಾಸ್ ಎಂಬುವರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ತಪ್ಪಲಿನ ಇಂಡಿಗನತ್ತ, ತೇಕಾಣೆ ಹಾಗೂ ಪಡಸಲನತ್ತ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಗುರುವಾರ ಲೇಖನಾ ಸಾಮಾಗ್ರಿ ವಿತರಿಸಿದರು.

  ಈ ವೇಳೆ ಪ್ರಸಾದ್ ಮಾತನಾಡಿ, ಮ.ಬೆಟ್ಟದ ತಪ್ಪಲಿನ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡ ವರ್ಗದ ಜನರು ವಾಸಿಸುತ್ತಿದ್ದಾರೆ. ಸರ್ಕಾರ ಪಠ್ಯಪುಸ್ತಕ, ಸಮವಸ್ತ್ರ ಹಾಗೂ ಇನ್ನಿತರೆ ಹಲವು ಸವಲತ್ತುಗಳನ್ನು ಒದಗಿಸುತ್ತಿದೆ. ಆದರೆ ಕೆಲವು ಪಾಲಕರು ತಮ್ಮ ಮಕ್ಕಳಿಗೆ ಅಗತ್ಯ ಕಲಿಕಾ ಸಾಮಾಗ್ರಿಗಳನ್ನು ಮಕ್ಕಳಿಗೆ ಕೊಡಿಸುವಲ್ಲಿ ಆರ್ಥಿಕವಾಗಿ ಸಮಸ್ಯೆ ಎದುರಿಸುತ್ತಿದ್ದಾರೆ. ಇದನ್ನು ಮನಗಂಡು ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುವಂತೆ ಇಂಡಿಗನತ್ತ ಶಾಲೆಯ 50, ತೇಕಾಣೆ ಹಾಗೂ ಪಡಸಲನತ್ತ ಶಾಲೆಯ 40 ವಿದ್ಯಾರ್ಥಿಗಳಿಗೆ ನೋಟ್‌ಪುಸ್ತಕ ಹಾಗೂ ಇನ್ನಿತರೆ ಲೇಖನಾ ಸಾಮಾಗ್ರಿಗಳನ್ನು ವಿತರಿಸಲಾಯಿತು. ಆದ್ದರಿಂದ ಮಕ್ಕಳು ಇದರ ಪ್ರಯೋಜನ ಪಡೆದುಕೊಂಡು ಕಲಿಕೆಯತ್ತ ಹೆಚ್ಚಿನ ಒತ್ತು ನೀಡಬೇಕು ಎಂದು ತಿಳಿಸಿದರು. ಈ ವೇಳೆ ಶಿಕ್ಷಕ ರಾಘವೇಂದ್ರ ಇದ್ದರು.

  See also  ಜನವರಿ 22ರಂದು ರಾಮಮಂದಿರ ಲೋಕಾರ್ಪಣೆ; 48 ದಿನ ಮಂಡಲೋತ್ಸವ: ಪೇಜಾವರ ಶ್ರೀ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts