More

  ಕಾಂಗ್ರೆಸ್ ಅವಧಿಯಲ್ಲಿ ಲಿಂಗಾಯತರ ಮೇಲೆ ದೌರ್ಜನ್ಯ

  ಚಾಮರಾಜನಗರ: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ವೀರಶೈವ ಲಿಂಗಾಯತ ಸಮುದಾಯದವರ ಮೇಲೆ ದೌರ್ಜನ್ಯ ಹೆಚ್ಚಾಗುತ್ತಿದ್ದು. ಚಿತ್ರದುರ್ಗದ ವೀರಶೈವ ಲಿಂಗಾಯತ ಸಮಾಜದ ರೇಣುಕಸ್ವಾಮಿ ಹತ್ಯೆ ಇದಕ್ಕೆ ಉದಾಹರಣೆಯಾಗಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಮೂಡ್ಲುಪುರ ನಂದೀಶ್ ಆರೋಪಿಸಿದರು.

  ಈಹಿಂದೆ ಲಿಂಗಾಯತ ಧರ್ಮಕ್ಕೆ ಸೇರಿದ ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ಸ್ನೇಹಾ ಹಿರೇಮಠ ಅವರನ್ನು ಕಾಲೇಜು ಆವರಣದಲ್ಲಿ ಅತ್ಯಂತ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಚಿತ್ರದುರ್ಗದ ರೇಣುಕಸ್ವಾಮಿ ಅವರನ್ನು ಸಿನಿಮೀಯ ರೀತಿಯಲ್ಲಿ ಬರ್ಬರವಾಗಿ ಹತ್ಯೆ ಮಾಡಿರುವುದು ಅತ್ಯಂತ ಅಮಾನವೀಯ ಕೃತ್ಯವಾಗಿದೆ. ಈ ವಿಚಾರದಲ್ಲಿ ರಾಜ್ಯ ಪೊಲೀಸ್ ಇಲಾಖೆ ಸೂಕ್ತ ಕ್ರಮವಹಿಸಬೇಕು. ಯಾವುದೇ ಒತ್ತಡಕ್ಕೂ ಮಣಿಯದೇ ರೇಣುಕಸ್ವಾಮಿ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು. ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ದರ್ಶನ್ ಅವರನ್ನು ವಜಾಗೊಳಿಸಬೇಕು ಎಂದು ಶನಿವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

  ರೇಣುಕಾಸ್ವಾಮಿ ಅವರ ಹತ್ಯೆಯನ್ನು ಖಂಡಿಸಿ ಜೂ.18 ರಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಶ್ರೀಚಾಮರಾಜೇಶ್ವರ ದೇವಸ್ಥಾನದಿಂದ ಬೆಳಿಗ್ಗೆ 10.30 ಗಂಟೆಗೆ ಪ್ರಾರಂಭವಾಗುವ ಪ್ರತಿಭಟನೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಂತ್ಯವಾಗಲಿದೆ. ಈ ವೇಳೆ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಈ ಪ್ರತಿಭಟನೆಯಲ್ಲಿ ವೀರಶೈವ ಲಿಂಗಾಯತ ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

  ಗೋಷ್ಠಿಯಲ್ಲಿ ಸಮುದಾಯದ ಹಿರಿಯ ಮುಖಂಡ ಕೋಡಿಮೋಳೆ ನಾಗರಾಜಪ್ಪ, ಹಂಗಳ ನಂಜಪ್ಪ, ಆಲೂರು ಮಲ್ಲು, ಡಾ.ನಟೇಶ್, ಡಾ.ಪರಮೇಶ್ವರಪ್ಪ, ಎನ್‌ರಿಚ್ ಮಹದೇವಸ್ವಾಮಿ ಹಾಜರಿದ್ದರು.

  See also  ಗಲಭೆ ಸ್ವರೂಪ ಪಡೆದಿರುವ ಫ್ರಾನ್ಸ್​ ಪ್ರತಿಭಟನೆ; ದುಬಾರಿ ಶೋರೂಮ್, ಅಂಗಡಿಗಳೇ ಕಿಡಿಗೇಡಿಗಳ ಟಾರ್ಗೆಟ್!

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts