More

  ಆಸ್ಪತ್ರೆ ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ

  ಹನೂರು : ತಾಲೂಕಿನ ರಾಮಾಪುರ ಸರ್ಕಾರಿ ಆಸ್ಪತ್ರೆಗೆ ವಿಷ ಕುಡಿದ ವ್ಯಕ್ತಿಯನ್ನು ಭಾನುವಾರ ಚಿಕಿತ್ಸೆಗಾಗಿ ಕರೆದೊಯ್ದಿದ್ದ ವೇಳೆ ವೈದ್ಯರಿಲ್ಲದ ಪರಿಣಾಮ ರೋಗಿಯ ಸಂಬಂಧಿಕರು ಸಾರ್ವಜನಿಕರ ಜತೆಗೂಡಿ ದಿಢೀರ್ ಪ್ರತಿಭಟನೆ ನಡೆಸಿದರು.

  ರಾಮಾಪುರ ಸಮೀಪದ ಪೂಜಾರಿಭೋವಿ ದೊಡ್ಡಿ ಗ್ರಾಮದ ಮುತ್ತುರಾಜು ಎಂಬುವರು ವಿಷ ಸೇವಿಸಿ ಅಸ್ವಸ್ಥರಾಗಿದ್ದರು. ಇವರನ್ನು ಕುಟುಂಬಸ್ಥರು ಭಾನುವಾರ ಸಂಜೆ 5 ಗಂಟೆಗೆ ರಾಮಾಪುರ ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ, ಅಲ್ಲಿ ವೈದ್ಯರು ಇಲ್ಲದ ಕಾರಣ ಅಲ್ಲಿನ ಸಿಬ್ಬಂದಿ ಕೊಳ್ಳೇಗಾಲದ ಆಸ್ಪತ್ರೆಗೆ ಕರೆದೊಯ್ಯುವಂತೆ ತಿಳಿಸಿದರು. ಇದರಿಂದ ಕುಟುಂಬಸ್ಥರು ಅಸಹಾಯಕರಾದರು ಎನ್ನಲಾಗಿದೆ.

  ಈ ಬಗ್ಗೆ ತಿಳಿದ ಸಾರ್ವಜನಿಕರು ಆಸ್ಪತ್ರೆಗೆ ಧಾಮಿಸಿ ಇಲ್ಲಿನ ಕಾರ್ಯವೈಖರಿಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಅಸ್ವಸ್ಥಗೊಂಡಿದ್ದ ವ್ಯಕ್ತಿಯನ್ನು ತುರ್ತು ವಾಹನದ ಮೂಲಕ ಕೊಳ್ಳೇಗಾಲ ಸರ್ಕಾರಿ ಉಪ ವಿಭಾಗೀಯ ಆಸ್ಪತ್ರೆಗೆ ಕಳುಹಿಸಿಕೊಟ್ಟರು. ಬಳಿಕ ಆಸ್ಪತ್ರೆಯ ಮುಂಭಾಗ ಜಮಾಯಿಸಿ ಪ್ರತಿಭಟನೆ ನಡೆಸಿದರು. ಹನೂರಿನ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡವರಿದ್ದು, ಚಿಕಿತ್ಸೆಗಾಗಿ ಈ ಆಸ್ಪತ್ರೆಗೆ ಆಗಮಿಸುತ್ತಾರೆ. ಆದರೆ, ಇಲ್ಲಿ ಸಮರ್ಪಕವಾಗಿ ಚಿಕಿತ್ಸೆ ದೊರಕುತ್ತಿಲ್ಲ. ಜತೆಗೆ, ವೈದ್ಯರು ಕೇಂದ್ರ ಸ್ಥಾನದಲ್ಲಿ ಇಲ್ಲ. ಹೆರಿಗೆಗಾಗಿ ಬೇರೆ ಆಸ್ಪತ್ರೆಯನ್ನು ಅವಲಂಬಿಸಿಬೇಕಿದೆ. ಇತ್ತ ಉಪಕರಣವನ್ನು ಅಳವಡಿಸಿರುವ ಡಯಾಲಿಸಸ್ ಕೇಂದ್ರ ಸಾರ್ವಜನಿಕರ ಸೇವೆಗೆ ಇನ್ನು ದೊರೆತಿಲ್ಲ. ಇದರಿಂದ ಜನರು ತುಂಬಾ ತೊಂದರೆ ಅನುಭವಿಸುವಂತಾಗಿದೆ. ಇದೀಗ ಆಸ್ಪತ್ರೆಯಲ್ಲಿ ವೈದ್ಯರು ಇಲ್ಲದ ಪರಿಣಾಮ ವಿಷ ಸೇವಿಸಿ ಅಸ್ವಸ್ಥರಾದ ವ್ಯಕ್ತಿಯನ್ನು ಕೊಳ್ಳೇಗಾಲದ ಆಸ್ಪತ್ರೆಗೆ ಕಳುಹಿಸಲಾಗಿದೆ. ಇಲ್ಲಿ ಆಸ್ಪತ್ರೆ ಇದ್ದರೂ ಬೇರೆ ಆಸ್ಪತ್ರೆಗೆ ಕರೆದೊಯ್ಯುವುದು ಎಷ್ಟರ ಮಟ್ಟಿಗೆ ಸರಿ? ಎಂದು ಪ್ರಶ್ನಿಸಿದರು.

  ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಡಿಎಚ್‌ಒ ಅವರಿಗೆ ಹಲವು ಬಾರಿ ಮನವಿ ಮಾಡಲಾಗಿದೆ. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವಂತೆ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಇನ್ಸ್‌ಪೆಕ್ಟರ್ ಮನೋಜ್‌ಕುಮಾರ್ ಅವರು ಸಾರ್ವಜನಿಕರ ಸಮಸ್ಯೆ ಆಲಿಸಿದರು. ಬಳಿಕ ಇನ್ಸ್‌ಪೆಕ್ಟರ್ ಅವರು ಸಂಬಂಧಪಟ್ಟ ಅಧಿಕಾರಿಯನ್ನು ಫೋನ್ ಮೂಲಕ ಸಂಪರ್ಕಿಸಿ ಸಾರ್ವಜನಿಕರಿಗೆ ಅಗತ್ಯ ಭರವಸೆ ನೀಡಿದ ಬಳಿಕ ಪ್ರತಿಭಟನೆ ಕೈ ಬಿಟ್ಟರು. ಪ್ರತಿಭಟನೆಯಲ್ಲಿ ಗ್ರಾಪಂ ಸದಸ್ಯ ರಘು, ಮುಖಂಡರಾದ ಗಿರೀಶ್, ಮಹದೇವ, ರಾಜಣ್ಣ, ಶೇಖರ್ ಹಾಗೂ ಇನ್ನಿತರರಿದ್ದರು.

  See also  ಕ್ಯಾನ್ಸರ್ ತಡೆಗೆ ಜನಜಾಗೃತಿ ಅಗತ್ಯ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts