More

  ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

  ಚಾಮರಾಜನಗರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2024-25ನೇ ಸಾಲಿನಲ್ಲಿ ಭಾರತೀಯ ಸೇನೆ, ಇತರೆ ಯೂನಿಫಾರ್ಮ್ ಸೇವೆಗಳಿಗೆ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

  ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ಗರಿಷ್ಟ ವಾರ್ಷಿಕ ಆದಾಯ ಮಿತಿ ಪ್ರವರ್ಗ-1ಕ್ಕೆ 2.50 ಲಕ್ಷ ರೂ ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ)ಗಳಿಗೆ 1 ಲಕ್ಷ ರೂ. ಇರಬೇಕು. ಅಭ್ಯರ್ಥಿಯು 10ನೇ ತರಗತಿ ಉತ್ತೀರ್ಣರಾಗಿದ್ದು ಪ್ರತಿ ವಿಷಯದಲ್ಲಿ ಕನಿಷ್ಠ 33 ಅಂಕಗಳು ಮತ್ತು ಸರಾಸರಿ ಶೇ.45ರಷ್ಟು ಅಂಕಗಳನ್ನು ಪಡೆದಿರಬೇಕು, ಗ್ರೇಡಿಂಗ್ ಸಿಸ್ಟಮ್ ಇದ್ದಲ್ಲಿ ಸಮಾನವಾದ ಗ್ರೇಡ್ ಪಡೆದಿರಬೇಕು, ವಯೋಮಿತಿಯು 10ನೇ ತರಗತಿಯ ಅಂಕ ಪಟ್ಟಿಯಲ್ಲಿರುವಂತೆ 2004ರ ಜುಲೈ 10ರಿಂದ 2007ರ ಜುಲೈ 10ರ ನಡುವಿನ ಅವಧಿಯಲ್ಲಿ ಜನಿಸಿರಬೇಕು.

  ತರಬೇತಿಯನ್ನು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಾತ್ರ ನೀಡಲಾಗುವುದು. ಅಭ್ಯರ್ಥಿಗಳು ಸದರಿ ಮೂರು ಜಿಲ್ಲೆಗಳಲ್ಲಿ ಯಾವುದಾದರೂ ಒಂದು ಜಿಲ್ಲೆಯನ್ನು ತರಬೇತಿಗೆ ಆಯ್ಕೆ ಮಾಡಿಕೊಂಡು ಅರ್ಜಿಯನ್ನು ಸದರಿ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಲ್ಲಿಸಬಹುದು.

  ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಇಲಾಖಾ ವೆಬ್‌ಸೈಟ್‌ನಿಂದ ಪಡೆದು ಜುಲೈ 10ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ- 08226-222180 ಹಾಗೂ ಸಹಾಯವಾಣಿ ದಕ್ಷಿಣ ಕನ್ನಡ ಜಿಲ್ಲೆ ದೂ.ಸಂ 0824-2225078, ಉಡುಪಿ ಜಿಲ್ಲೆ ದೂ.ಸಂ 0820-2574881, ಉತ್ತರ ಕನ್ನಡ ಜಿಲ್ಲೆ ದೂ.ಸಂ-08382-226589 ಅನ್ನು ಸಂಪರ್ಕಿಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  See also  ಕಾವ್ಯ ಸಂಸ್ಕೃತಿ ಯಾನ - ಕವಿಗಳಿಗೆ ಆಹ್ವಾನ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts