31ರವರೆಗೆ ರೇಷನ್ ಕಾರ್ಡ್ ಇ-ಕೆವೈಸಿಗೆ ಕಾಲಾವಕಾಶ

EKYC is mandatory for pension
Published on

ಚಾಮರಾಜನಗರ: ಪಡಿತರ ಚೀಟಿಯಲ್ಲಿ ಇದುವರೆಗೆ ಇ-ಕೆವೈಸಿ ಮಾಡಿಸದ ಅಥವಾ ಬೇರೆ ಜಿಲ್ಲೆಗಳಿಗೆ ಕೆಲಸಕ್ಕಾಗಿ ವಲಸೆ ಹೋಗಿರುವ ವ್ಯಕ್ತಿಗಳು ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಬಯೋ ದೃಢೀಕರಣ ಮಾಡಿಸಲು ಆ.31ರವರೆಗೆ ಅವಧಿ ವಿಸ್ತರಿಸಲಾಗಿದೆ.

ಪಡಿತರ ಚೀಟಿದಾರರಿಗೆ ಸಂಬಂಧಪಟ್ಟ ಪಡಿತರ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸುವಂತೆ ತಿಳಿಸಿ ಬಯೋದೃಢೀಕರಣ ಸಂಗ್ರಹಣೆ ಕಾರ್ಯವನ್ನು ಕಳೆದ ನಾಲ್ಕು ವರ್ಷಗಳಿಂದಲೂ ಮಾಡಲಾಗುತ್ತಿದೆ. ಕೆಲ ಪಡಿತರ ಚೀಟಿದಾರರು ಗ್ರಾಮಗಳಲ್ಲಿ ವಾಸವಿಲ್ಲದೆ ವಲಸೆ ಹೋಗಿರುವ ಹಿನ್ನೆಲೆಯಲ್ಲಿ ಜೂ.2ರಿಂದ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಪೋರ್ಟಬಲಿಟಿ ಮೂಲಕ ಬಯೋದೃಢೀಕರಣ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಈ ನಿಟ್ಟಿನಲ್ಲಿ ಇದುವರೆಗೆ ಇ-ಕೆವೈಸಿ ಮಾಡಿಸದ ಪಡಿತರ ಚೀಟಿದಾರರು ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಬಯೋದೃಢೀಕರಣ ಮಾಡಲು ಆ.31ರವರೆಗೆ ಅವಧಿ ವಿಸ್ತರಿಸಲಾಗಿದ್ದು, ಇ-ಕೆವೈಸಿ ಪ್ರಕ್ರಿಯೆಯಲ್ಲಿ ಶೇ.100 ಪ್ರಗತಿ ಸಾಧಿಸಲು ಸಹಕರಿಸಬೇಕು. ತಪ್ಪಿದದ್ದಲ್ಲಿ ಇ-ಕೆವೈಸಿ ಆಗಿಲ್ಲದ ಪಡಿತರ ಚೀಟಿದಾರರಿಗೆ 2024ರ ಸೆಪ್ಟೆಂಬರ್ ಮಾಹೆಯ ಆಹಾರ ಪದಾರ್ಥಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net