ಹೊರಗುತ್ತಿಗೆ ನೌಕರರ ಮರುನೇಮಕಕ್ಕೆ ಆಗ್ರಹಿಸಿ ಪ್ರತಿಭಟನೆ

ಚಾಮರಾಜನಗರ: ಎ್ಐಆರ್ ದಾಖಲಾಗಿದೆ ಎಂಬ ಕಾರಣ ನೀಡಿ ಕೆಲಸದಿಂದ ವಜಾಗೊಳಿಸಿದ ಸಿಮ್ಸ್ ಹೊರಗುತ್ತಿಗೆ ಕಾರ್ಮಿಕರನ್ನು ಮರುನೇಮಕ ಮಾಡಿಕೊಳ್ಳುವಂತೆ ಒತ್ತಾಯಿಸಿ ನೌಕರರು ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಯ ಬಳಿ ಬುಧವಾರ ಜಮಾಯಿಸಿದ ಸಿಮ್ಸ್ ಹೊರಗುತ್ತಿಗೆ ನೌಕರರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸಿಮ್ಸ್ ಆಸ್ಪತ್ರೆಯ ಡೀನ್ ಮತ್ತು ನಿರ್ದೇಶಕ ಡಾ.ಮಂಜುನಾಥ್ ಕಾರ್ಮಿಕರ ಸಂಘದ ಪದಾಧಿಕಾರಿಗಳ ಮೇಲೆ ಎ್ಐಆರ್ ದಾಖಲಾಗಿದೆ ಎಂಬ ಕಾರಣ ನೀಡಿ ಸಹಜ ನ್ಯಾಯಕ್ಕೆ ವಿರುದ್ಧವಾಗಿ ಹಾಗೂ ಯಾವುದೇ ಆಂತರಿಕ ವಿಚಾರಣೆ ಮಾಡದೇ ಒಂದು ವರ್ಷದ ಹಿಂದೆ ಹಲವು ಕಾರ್ಮಿಕರನ್ನು ಕೆಲಸದಿಂದ ವಜಾ ಮಾಡಿದ್ದಾರೆ. ಈ ಹಿಂದಿನ ಡೀನ್‌ಗೆ ಸಂಬಂಧಿಸಿದ ಪ್ರಕರಣದ ಪಟ್ಟಿಯಲ್ಲಿರುವ ಕಾರ್ಮಿಕರನ್ನು ಹೊಸದಾಗಿ ಗುತ್ತಿಗೆ ಪಡೆದ ಏಜೆನ್ಸಿ ಮೂಲಕ ಕೆಲಸ ನಿರಾಕರಿಸಿರುತ್ತಾರೆ. ಈ ಪ್ರಕರಣದಲ್ಲಿ ಇರುವ ಕೆಲವರಿಗೆ ಉದ್ಯೋಗ ನೀಡಿ, ಕಾರ್ಮಿಕ ಸಂಘದಲ್ಲಿ ಸಕ್ರಿಯವಾಗಿರುವ ಕಾರ್ಮಿಕರಿಗೆ ಕೆಲಸ ನಿರಾಕರಿಸಿ ತಾರತಮ್ಯ ನೀತಿಯನ್ನು ಅನುಸರಿಸುತ್ತಾ ಬಂದಿದ್ದಾರೆ ಎಂದು ದೂರಿದರು.

ಕಳೆದ 10 ದಿನಗಳ ಹಿಂದೆ ಡೀನ್ ಮತ್ತು ನಿರ್ದೇಶಕರು ಹಾಗೂ ಇತರೆ ಕಚೇರಿ ಸಿಬ್ಬಂದಿಗಳ ವಿರುದ್ಧವೂ ಎ್ಐಆರ್ ದಾಖಲಾಗಿದೆ. ಆದರೆ ಅವರು ಯಾರನ್ನು ಕೆಲಸದಿಂದ ವಜಾಗೊಳಿಸಿಲ್ಲ. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಈ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಿ ಹೊರಗುತ್ತಿಗೆ ನೌಕರರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಮನವಿ ಮಾಡಿದರು. ಪ್ರತಿಭಟನೆಯಲ್ಲಿ ಡಿ.ಮಹಾದೇವ್, ಕುಮಾರ್, ಎನ್.ಮಹೇಶ್, ಆದರ್ಶ ಕುಮಾರ್, ಮಹದೇವಸ್ವಾಮಿ (ಶನಿ), ರವಿ, ದೊರೆ ರಾಜ್, ಮಂಜು, ಉಮಾಪತಿ, ಬೀರೇಗೌಡ, ವಿನಯ್ ಹಾಗೂ ಇತರರು ಭಾಗವಹಿಸಿದ್ದರು.

Share This Article

ಒಂದು ಬಾರಿ ಇದನ್ನು ಕುಡಿದರೆ ಸಾಕು ನಿಮ್ಮ ಹೊಟ್ಟೆ ಫುಲ್​ ಕ್ಲೀನ್ ಆಗಿಬಿಡುತ್ತೆ! Stomach problems

ತಿಂದ ಆಹಾರ ಸರಿಯಾಗಿ ಜೀರ್ಣವಾಗದಿದ್ದರೆ ಆ ನೋವು ( Stomach problems ) ಅಥವಾ ಕಿರಿಕಿರಿ…

Health Tips : ಸಕ್ಕರೆ ಕಾಯಿಲೆಯಿಂದ ಬಳಲುತ್ತೀದ್ದೀರಾ? ಬೆಳ್ಳಂಬೆಳಗ್ಗೆ ಕರಿಬೇವಿನ ಎಲೆಯ ನೀರನ್ನು ಕುಡಿಯಿರಿ ಸಾಕು

ಬೆಂಗಳೂರು: ಕರಿಬೇವು ಕೇವಲ ಬೆಳಗಿನ ತಿಂಡಿಗೆ ರುಚಿ ಕೊಡಲು ಒಗ್ಗರಣೆಗೆ ಮಾತ್ರ ಮೀಸಲಾಗಿಲ್ಲ. ಕರಿಬೇವಿನ ಎಲೆಗಳು…

ಮನೆಯಲ್ಲೇ ತಯಾರಿಸಿಕೊಳ್ಳಿ ಕೂದಲು ಸಂರಕ್ಷಣೆಯ ಶುದ್ಧ ತೈಲ

ಸದೃಢವಾದ, ಹೊಳೆಯುವ, ನೀಳ ಕೂದಲು ಬೇಕೆಂಬ ಆಸೆ ತುಂಬಾ ಜನರಿಗೆ ಇದ್ದೇ ಇರುತ್ತದೆ. ಜೊತೆಗೆ ಕೂದಲು…