ಚಾಮರಾಜನಗರ: ಯಳಂದೂರು ಪಟ್ಟಣ ಪಂಚಾಯಿತಿ ವತಿಯಿಂದ 2024-25ನೇ ಸಾಲಿಗೆ ಶೇ 24.10, 7.25 ಹಾಗೂ ಶೇ 5ರ ಕಾರ್ಯಕ್ರಮಗಳಡಿ ವಿವಿಧ ವೈಯಕ್ತಿಕ ಸೌಲಭ್ಯಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಬಿಎ, ಬಿಕಾಂ, ಬಿಎಸ್.ಸಿ, ಎಂ.ಎ, ಎಂ.ಸಿ, ಎಂ.ಕಾಂ ವಿದ್ಯಾರ್ಥಿಗಳಿಗೆ ಪೋತ್ಸಾಹಧನ, ಬಿ.ಇ, ಎಂ.ಬಿ.ಬಿ.ಎಸ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಖರೀದಿಸಲು ಸಹಾಯಧನ ನೀಡಲಾಗುವುದು.
ಅಂಗವಿಕಲ ಫಲಾನುಭವಿಗಳಿಗೆ ಶೌಚಾಲಯ ನಿರ್ಮಾಣಕ್ಕೆ ಸಹಾಯಧನ, ಶಸ್ತ್ರಚಿಕಿತ್ಸೆಗೆ ಪ್ರೋತ್ಸಾಹಧನ, ಸ್ವಚ್ಛ ಭಾರತ್ ಯೋಜನೆಯಡಿ ಶೌಚಾಲಯ ನಿರ್ಮಾಣ ಮಾಡಲು ಅರ್ಜಿ ಸಲ್ಲಿಸುವ ಫಲಾನುಭವಿಗಳು ವಿದ್ಯಾರ್ಹತೆ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಬಿ.ಪಿ.ಎಲ್ ಕಾರ್ಡ್, ಲಾಯರ್ ಪ್ರಮಾಣ ಪತ್ರ ಹಾಗೂ ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್ ಪ್ರತಿಯನ್ನು ಅರ್ಜಿ ಜೊತೆಯಲ್ಲಿ ಲಗತ್ತಿಸಬೇಕು.
ಅರ್ಜಿಗಳನ್ನು ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಪಡೆದು ಸೆಪ್ಟೆಂಬರ್ 10 ರಿಂದ 30 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಯಳಂದೂರು ಪಟ್ಟಣ ಪಂಚಾಯಿತಿ ಸಂಪರ್ಕಿಸುವಂತೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.