ಯಳಂದೂರು: ಕುದೇರು ಗ್ರಾಮದ ದಿ ಬೆಸ್ಟ್ ಸ್ಕೂಲ್ ಆಫ್ ಎಕ್ಸೆಲೆನ್ಸ್ ಶಾಲೆಯ ವಿದ್ಯಾರ್ಥಿಗಳು 14 ವರ್ಷದೊಳಗಿನ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈಚೆಗೆ ಚಾಮರಾಜನಗರ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದಲ್ಲಿ ಯೋಗಾಸನ ಸ್ಪರ್ಧೆಯಲ್ಲಿ ಈ ಶಾಲೆಯ ಬಿ. ನಂದನ್ ದ್ವಿತೀಯ ಸ್ಥಾನ, ಮಹಾಂತೇಶ್ ತೃತೀಯ ಸ್ಥಾನ ಹಾಗೂ ರೇವಂತ್ ಐದನೇ ಸ್ಥಾನವನ್ನು ಪಡೆದುಕೊಂಡು ಈ ಮೂವರು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ತಾಳಬದ್ದ ಯೋಗಾಸನದಲ್ಲಿ ಮಹಾಂತೇಶ್, ಕಲಾತ್ಮಕ ಯೋಗಾಸನ ಸ್ಪರ್ಧೆಯಲ್ಲಿ ಬಿ. ನಂದನ್ ಪ್ರಥಮ ಸ್ಥಾನ, ಬಾಲಕಿಯರ ವಿಭಾಗದಲ್ಲಿ ಮೋನಿಕಾ ತಾಳಬದ್ಧ ಯೋಗಾಸನದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡು ವಿಭಾಗಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಎಲ್ಲ ಕ್ರೀಡಾಪಟುಗಳಿಗೆ ಸಂಸ್ಥೆಯ ಅಧ್ಯಕ್ಷ ಡಾ. ಗಿರೀಶ್, ಕಾರ್ಯದರ್ಶಿ ರವಿ, ಆಡಳಿತ ಮಂಡಳಿ ಸದಸ್ಯರಾದ ಗುರು ಪ್ರಾಂಶುಪಾಲ, ಜೀಶಾ ದೇವನ್ ದೈಹಿಕ ಶಿಕ್ಷಕ ಎನ್. ಮಲ್ಲಿಕಾರ್ಜುನಸ್ವಾಮಿ ಮತ್ತು ಶಿಕ್ಷಕ ವೃಂದದವರು ಮತ್ತು ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.