ಸೆ.23 ರಂದು ಪ್ರಥಮ ಸುಗಮ ಸಂಗೀತ ಸಮ್ಮೇಳನ

ಚಾಮರಾಜನಗರ: ಕರ್ನಾಟಕ ಸುಗಮ ಸಂಗೀತ ಪರಿಷತ್ತು ಜಿಲ್ಲಾ ಘಟಕದ ವತಿಯಿಂದ ಸೆ.23 ರಂದು ಜಿಲ್ಲಾ ಪ್ರಥಮ ಸುಗಮ ಸಂಗೀತ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಪರಿಷತ್ತಿನ ಜಿಲ್ಲಾಧ್ಯಕ್ಷ ಬಸವರಾಜು ತಿಳಿಸಿದರು.

ಪ್ರಸಿದ್ಧ ಸುಗಮ ಸಂಗೀತ ಗಾಯಕ ಮತ್ತು ಸಂಗೀತ ನಿರ್ದೇಶಕ ಸಿ.ವಿಶ್ವನಾಥ್ ಅವರನ್ನು ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಮಾಡಲಾಗಿದೆ. ನಗರದ ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ಅಂದು ಬೆಳಿಗ್ಗೆ 9 ಗಂಟೆಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಬಿ.ವಿ.ವೆಂಕಟನಾಗಪ್ಪಶೆಟ್ಟಿ ಚಾಲನೆ ನೀಡುವರು. ಮೆರವಣಿಗೆ ಬಳಿಕ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮವನ್ನು ಕರ್ನಾಟಕ ಸುಗಮ ಸಂಗೀತ ಪರಿಷತ್ತು ರಾಜ್ಯಾಧ್ಯಕ್ಷ ವೈ.ಕೆ.ಮುದ್ದುಕೃಷ್ಣ ಉದ್ಘಾಟಿಸುವರು. ಶಾಸಕ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು ಎಂದು ಭಾನುವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಎಚ್.ಎಂ.ಗಣೇಶ್‌ಪ್ರಸಾದ್, ಎಂ.ಆರ್.ಮಂಜುನಾಥ್, ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ, ಜಿಲ್ಲಾ ಗ್ಯಾರೆಂಟಿ ಯೋಜನೆ ಸಮಿತಿ ಅಧ್ಯಕ್ಷ ಎಚ್.ವಿ.ಚಂದ್ರು, ಡಾ.ಕಿಕ್ಕೇರಿ ವಿಶ್ವನಾಥ್, ತೋಂಟದಾರ್ಯ, ಆರ್.ಉಮೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಈ ಸಂದರ್ಭದಲ್ಲಿ ಹಲವಾರು ಹಿರಿಯ ಸುಗಮ ಸಂಗೀತ ನಿರ್ದೇಶಕರು ಹಾಗೂ ಕವಿಗಳನ್ನು ಸನ್ಮಾನಿಸಲಾಗುವುದು ಎಂದರು.
ಮಧ್ಯಾಹ್ನ 2 ಗಂಟೆಗೆ ವಿಚಾರಗೋಷ್ಠಿಯನ್ನು ಆಯೋಜಿಸಲಾಗಿದೆ. ಸಂಜೆ 4 ಗಂಟೆಗೆ ವಿವಿಧ ಕಾಲೇಜು ವಿದ್ಯಾರ್ಥಿಗಳಿಂದ ಹಾಗೂ ಕಲಾವಿದರಿಂದ ಸಮೂಹ ಗಾಯನ ಇರಲಿದೆ. ಸಂಜೆ 6 ಗಂಟೆಗೆ ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ಸಮಾರೋಪ ಸಮಾರಂಭ ಹಾಗೂ ಗೀತೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

ಗೋಷ್ಠಿಯಲ್ಲಿ ಕರ್ನಾಟಕ ಸುಗಮ ಸಂಗೀತ ಪರಿಷತ್ತು ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಸಿ.ಎಂ.ನರಸಿಂಹಮೂರ್ತಿ, ಜಿಲ್ಲಾ ಕಾರ್ಯದರ್ಶಿ ಹರದನಹಳ್ಳಿ ನಟರಾಜ್, ಉಪಾಧ್ಯಕ್ಷ ಪುಟ್ಟಸ್ವಾಮಿ ಹಾಜರಿದ್ದರು.

Share This Article

ದೀಪಾವಳಿಗೆ ಮನೆ ಸ್ವಚ್ಛ ಮಾಡ್ತಾ ಇದ್ದೀರಾ? ಮನೆಯಲ್ಲಿ cockroach ಇದ್ರೆ ಹೀಗೆ ಮಾಡಿ…

ಬೆಂಗಳೂರು: ಅನೇಕ ಜನರು ತಮ್ಮ ಮನೆಯಲ್ಲಿ ಜಿರಳೆಗಳ ( cockroach )  ಸಮಸ್ಯೆಯನ್ನು ಎದುರಿಸುತ್ತಾರೆ. ಅವುಗಳನ್ನು…

Crab Sukka : ಭಾನುವಾರದ ಬಾಡೂಟಕ್ಕೆ ಮಾಡಿ ರುಚಿಯಾದ ಏಡಿ ಸುಕ್ಕ..

ಬೆಂಗಳೂರು: ವಾರದ ಕೊನೆಯಲ್ಲಿ ಮಧ್ಯಾಹ್ನದ ಸಮಯಕ್ಕೆ ರುಚಿಯಾದ ಅಡುಗೆ ಏನಾದರು ಮಾಡುವ ಪ್ಲಾನ್ (Plan)​ ಹಾಕಿಕೊಂಡಿದ್ದೀರಾ?ಆದಿತ್ಯವಾರದಂದು…

ಹಾವು ಕಚ್ಚಿದಾಗ ಮಾಡುವ ಈ ಒಂದು ತಪ್ಪಿನಿಂದ ಪ್ರಾಣ ಹೋಗುತ್ತೆ ಎಚ್ಚರ! ಈ ರೀತಿ ಮಾಡೋದನ್ನು ತಪ್ಪಿಸಿ | Snakes

ಕೊಲ್ಲಂ: ಹಾವುಗಳು ( Snakes ) ಕಚ್ಚಿದ ಸಂದರ್ಭದಲ್ಲಿ ಯಾವ ಹಾವು ಕಚ್ಚಿತ್ತು ಎಂಬುದನ್ನು ತಿಳಿದುಕೊಳ್ಳಲು…