ಸೆ.22ರಂದು ಅರುಂಧತಿ ಸೊಸೈಟಿ ಉದ್ಘಾಟನೆ

ಚಾಮರಾಜನಗರ: ಅರುಂಧತಿ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಉದ್ಘಾಟನಾ ಸಮಾರಂಭವನ್ನು ಸೆ. 22 ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಅರಕಲವಾಡಿ ಜವರಯ್ಯ ತಿಳಿಸಿದರು.

ನಗರದ ಡಾ.ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಮಧ್ಯಾಹ್ನ 3 ಗಂಟೆಗೆ ಆರಂಭವಾಗುವ ಸಮಾರಂಭದಲ್ಲಿ ಸುತ್ತೂರು ಕ್ಷೇತ್ರದ ಶ್ರೀವೀರ ಸಿಂಹಾಸನ ಮಹಾಸಂಸ್ಥಾನ ಮಠದ ಶ್ರೀಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಹಾಗೂ ಚಿತ್ರದುರ್ಗಾ ಶಿವಶರಣ ಮಾದಾರಚನ್ನಯ್ಯಗುರುಪೀಠದ ಶ್ರೀಬಸವಮೂರ್ತಿಮಾದಾರ ಚನ್ನಯ್ಯಸ್ವಾಮೀಜಿ, ಹಿರಿಯೂರು ತಾಲೂಕಿ ಶ್ರೀಮಹಾಶಿವಶರಣ ಹರಳಯ್ಯ ಗುರುಪೀಠ, ಐಮಂಗಲದ ಶ್ರೀಬಸವಹರಳಯ್ಯ ಸ್ವಾಮೀಜಿ, ಸಿದ್ದಮಲ್ಲೇಶ್ವರ ವಿರಕ್ತ ಮಠಾಧ್ಯಕ್ಷ ಶ್ರೀಚನ್ನಬಸವಸ್ವಾಮೀಜಿ, ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿಮಠದ ಗುರುಹರಳಯ್ಯಸ್ವಾಮಿಜೀ ದಿವ್ಯ ಸಾನಿಧ್ಯ ವಹಿಸಲಿದ್ದಾರೆ ಎಂದು ಶುಕ್ರವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮಾಜಿ ಕೇಂದ್ರ ಸಚಿವ ನಾರಾಯಣಸ್ವಾಮಿ ಸಮಾರಂಭ ಉದ್ಘಾಟಿಸಲಿದ್ದಾರೆ. ಸಂಸದ ಸುನೀಲ್ ಬೋಸ್ ಸೊಸೈಟಿ ಲೋಗೋ ಬಿಡುಗಡೆ ಮಾಡಲಿದ್ದಾರೆ. ಶಾಸಕ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಎಚ್.ಎಂ.ಗಣೇಶ್‌ಪ್ರಸಾದ್, ಎಂ.ಆರ್.ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಡಾ.ತಿಮ್ಮಯ್ಯ, ಮಾಜಿ ಸಚಿವ ಕೋಟೆ ಎಂ.ಶಿವಣ್ಣ, ಮಾಜಿ ವಿಧಾನ ಪರಿಷತ್ ಸದಸ್ಯ ಧರ್ಮಸೇನಾ, ಮೈಸೂರು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಶಿವಪ್ರಸಾದ್ ಪುಷ್ಪಾರ್ಚನೆ ನೆರವೇರಿಸುವರು ಎಂದರು.

ಜಿಲ್ಲಾಧಿಕಾರಿ ಶಿಲ್ಪಾನಾಗ್, ಮೈಸೂರು ಲೋಕೋಪಯೋಗಿ ಇಲಾಖೆ ಅಧೀಕ್ಷಕ ಇಂಜಿನಿಯರ್ ಆರ್.ವಿನಯ್ ಕುಮಾರ್, ಸಹಕಾರ ಲೆಕ್ಕಪರಿಶೋಧನಾ ಇಲಾಖೆ ಉಪನಿರ್ದೇಶಕ ಎಂ.ಮಹದೇವಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಎಂ.ಮುನಿರಾಜ್, ಸಹಕಾರ ಇಲಾಖೆ ಉಪನಿಪನಿಬಂಧಕ ಜಿ.ಸಿ.ಜ್ಯೋತಿ ಅರಸ್, ಕರ್ನಾಟಕ ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ಚಾ.ಗು.ನಾಗರಾಜ್, ಬೆಂಗಳೂರು ಪ್ರಥಮ ದರ್ಜೆ ಗುತ್ತಿಗೆದಾರ ಎಂ.ಮಹದೇವಸ್ವಾಮಿ, ತಾಲೂಕು ಬಿಸಿಎಂ ಅಧಿಕಾರಿ ಲಿಂಗರಾಜು, ತೆರಕಣಾಂಬಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂ.ಮಹದೇವಸ್ವಾಮಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ನಮ್ಮ ಸಮುದಾಯದ ಆರ್ಥಿಕ ಸ್ವಾವಲಂಬನೆಗಾಗಿ ಸೊಸೈಟಿಯನ್ನು ಸ್ಥಾಪಿಸಲಾಗಿದ್ದು, ಸಂಘದ ಸದಸ್ಯತ್ವ ಹೆಚ್ಚು ಮಾಡುವುದು, ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿಯಲ್ಲಿ ಸದಸ್ಯರಗಳನ್ನು ನೊಂದಣಿ ಮಾಡುವುದು, ಕಿರು ಸಾಲ ಯೋಜನೆ ಅಳವಡಿಸಿಕೊಂಡು ಮಹಿಳಾ ಸಂಘಗಳಿಗೆ ಆರ್ಥಿಕ ಸಾಲಸೌಲಭ್ಯ ಒದಗಿಲಾಗುವುದು ಎಂದರು.

ಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಹಸಗೂಲಿ ಸಿದ್ದಯ್ಯ, ಮುಖ್ಯಕಾರ್ಯನಿರ್ವಾಹಕ ಶಿವಕುಮಾರ್, ಕರ್ನಾಟಕ ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ಚಾ.ಗು.ನಾಗರಾಜು, ಪ್ರವರ್ತಕರಾದ ಅರಕಲವಾಡಿ ಮಹದೇವಯ್ಯ, ಮೂಡಳ್ಳಿಮೂರ್ತಿ, ಸಿ.ಚನ್ನಬಸವಯ್ಯ, ನಿರ್ದೇಶಕರಾದ ಎಚ್.ಎಚ್.ನಾಗರಾಜು, ಎಂ.ಶಿವಕುಮಾರ್ ಇದ್ದರು.

Share This Article

ದೀರ್ಘ ಕಾಲದ ಬೆನ್ನು ನೋವು ನಿಯಂತ್ರಣಕ್ಕೆ ಮಾರ್ಜಾಲಾಸನ | Back Pain

ಪ್ರ: ಮಾರ್ಜಾಲಾಸನದ ಬಗ್ಗೆ ಮಾಹಿತಿ, ಅಭ್ಯಾಸದ ಕ್ರಮ ತಿಳಿಸಿ (Back Pain). ಉ: ಈ ಆಸನಕ್ಕೆ…

ಎಳನೀರನ್ನು ಹೀಗೆ ಕುಡಿದರೆ ಸಾಕು ಹೊಟ್ಟೆಯ ಸುತ್ತ ಸೇರಿಕೊಂಡಿರುವ ಬೊಜ್ಜು ಬೇಗನೆ ಕರಗುತ್ತೆ..!

ಪ್ರತೀ ಊರಿನಲ್ಲಿ ಎಳನೀರು ಸಿಗುತ್ತದೆ. ಇದನ್ನು ನಿಯಮಿತವಾಗಿ ಕುಡಿಯುತ್ತಾ ಬಂದರೆ ತೂಕವನ್ನು ಸಾಕಷ್ಟು ಪ್ರಮಾಣದಲ್ಲಿ ಕಡಿಮೆ…

Weight Loss: ಊಟ ಬಿಟ್ಟರೆ ತೂಕ ಕಡಿಮೆಯಾಗುತ್ತಾ? ಈ ವಿಷಯಗಳನ್ನು ನಂಬಬೇಡಿ!

ಬೆಂಗಳೂರು: ಹೆಚ್ಚಿನವರು ಅಧಿಕ ತೂಕದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅವರು ತೂಕ ಇಳಿಸಿಕೊಳ್ಳಲು (Weight Loss) ಹಲವು…