ಸಿನಿಮಾ

ಗಣೇಶ್ ಪ್ರಸಾದ್‌ಗೆ ಸಚಿವ ಸ್ಥಾನ ನೀಡಿ

ಚಾಮರಾಜನಗರ: ಮೈಸೂರು-ಚಾ.ನಗರ ಭಾಗದ ವೀರಶೈವ ಲಿಂಗಾಯತ ಸಮುದಾಯದ ಏಕೈಕ ಶಾಸಕ ಎಚ್.ಎಂ. ಗಣೇಶ್‌ಪ್ರಸಾದ್‌ಗೆ ಸಚಿವ ಸ್ಥಾನ ನೀಡಬೇಕು ಎಂದು ಮುಖಂಡ ಎಂ.ಗುರುಸ್ವಾಮಿ ಒತ್ತಾಯಿಸಿದರು.


ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ದಾಖಲಿಸಿದೆ. ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಗಣೇಶ್ ಪ್ರಸಾದ್ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಭಾಗದ ಅಭಿವೃದ್ಧಿಯ ಹರಿಕಾರ ದಿ.ಎಚ್.ಎಸ್.ಮಹದೇವಪ್ರಸಾದ್ ಪುತ್ರ ಎಚ್.ಎಂ.ಗಣೇಶ್ ಪ್ರಸಾದ್‌ಗೆ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.


ಗಣೇಶ್‌ಪ್ರಸಾದ್ ಸತತ 5 ವರ್ಷಗಳಿಂದಲೂ ಕ್ಷೇತ್ರದ ಜನರ ಜತೆಗೆ ಉತ್ತಮ ಒಡನಾಟ ಇಟ್ಟುಕೊಂಡು ಬಂದಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಜನರಿಗೆ ನೆರವಾಗಿದ್ದಾರೆ. ಜನರ ಕಷ್ಟ-ಸುಖಗಳಿಗೆ ಸ್ಪಂದಿಸಿದ್ದಾರೆ. ಹಾಗಾಗಿ ಸಂಪುಟ ರಚನೆಯ ಸಂದರ್ಭದಲ್ಲಿ ಸಮುದಾಯವನ್ನು ಪರಿಗಣಿಸಬೇಕು ಎಂದು ಗುರುಸ್ವಾಮಿ ಮನವಿ ಮಾಡಿದರು. ಗೋಷ್ಠಿಯಲ್ಲಿ ಸಮುದಾಯದ ಮುಖಂಡರಾದ ನಾಗರಾಜು, ಗುರುಸ್ವಾಮಿ, ಪಟೇಲ್ ಸುರೇಶ್, ಹರವೆ ರೇವಪ್ಪಾ, ಮಂಜುನಾಥ್, ಜಗದೀಶ್ ಹಾಜರಿದ್ದರು.

Latest Posts

ಲೈಫ್‌ಸ್ಟೈಲ್