More

    ಸಮರ್ಪಕ ವಿದ್ಯುತ್ ಪೂರೈಸುವಂತೆ ಒತ್ತಾಯ

    ಚಾಮರಾಜನಗರ: ನಿರಂತರ ಏಳು ಗಂಟೆ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ಅ.9 ರಂದು ಕೊಳ್ಳೇಗಾಲದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಾರ್ಯಪಾಲಕ ಅಭಿಯಂತರರ ಕಚೇರಿಯ ಮುಂಭಾಗ ರಾಜ್ಯ ರೈತ ಸಂಘದ ವತಿಯಿಂದ ಬಾರುಕೋಲು ಚಳುವಳಿ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ತಿಳಿಸಿದರು.

    ಜಿಲ್ಲೆಯ ಎಲ್ಲಾ ತಾಲೂಕಿನ ವ್ಯಾಪ್ತಿಯಲ್ಲಿ ಒಂದು ವಾರದಿಂದ ಕೇವಲ 2 ಗಂಟೆಗಳು ಮಾತ್ರ ವಿದ್ಯುತ್ ಪೂರೈಕೆ ಮಾಡುತ್ತಿದ್ದು, ಸಾವಿರಾರು ಎಕರೆಯಲ್ಲಿ ರೈತರು ಬೆಳೆದಿರುವ ಬೆಳೆಗಳಿಗೆ ನೀರಿಲ್ಲದೇ ಸಂಕಷ್ಟ ಅನುಭವಿಸುವಂತಾಗಿದೆ. ಜನ-ಜಾನುವಾರುಗಳಿಗೆ ಕುಡಿಯಲು ನೀರಿಲ್ಲದೇ ಪರದಾಡುವಂತಾಗಿದೆ. ಈ ಕಾರಣಕ್ಕೆ ನಿರಂತರವಾಗಿ 7 ಗಂಟೆಗಳ ಕಾಲ ರೈತರಿಗೆ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿ ಕೊಳ್ಳೆಗಾಲದ ಚೆಸ್ಕಾಂ ಕಚೇರಿಯ ಮುಂಭಾಗ ಸರ್ಕಾರದ ವಿರುದ್ಧ ಬಾರುಕೋಲು ಚಳುವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಭಾನುವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

    ಜಿಲ್ಲೆಯಲ್ಲಿ ಸಂಪೂರ್ಣ ಬರಗಾಲದ ಪರಿಸ್ಥಿತಿ ಉಂಟಾಗಿದೆ, ಆದರೆ ರಾಜ್ಯ ಸರ್ಕಾರ ಸಾಧಾರಣಾ ಬರ ಪ್ರದೇಶ ಎಂದು 3 ತಾಲೂಕುಗಳನ್ನು ೋಷಣೆ ಮಾಡಿ ಅನ್ಯಾಯವೆಸಗಿದೆ. ಈ ಬಾರಿ ರೈತರು ಮಳೆ ಇಲ್ಲದೇ ಕಂಗಾಲಾಗಿದ್ದಾರೆ. ಮುಂಗಾರು, ಹಿಂಗಾರಿನಲ್ಲಿ ಸರಿಯಾಗಿ ಬಿತ್ತನೆ ಮಾಡಿಲ್ಲ. ಕೊಳವೆಬಾವಿ ಮೂಲಕ ಬೆಳೆಗಳಿಗೆ ನೀರು ಹಾಯಿಸಲು ಕೇವಲ 2 ಗಂಟೆ ಮಾತ್ರ ವಿದ್ಯುತ್ ಪೂರೈಕೆ ಮಾಡುತ್ತಿದ್ದು, ಇದರಿಂದಾಗಿ ಬೆಳೆಗಳು ಒಣಗುತ್ತಿದೆ. ಈ ಭಾಗದ ಸಂಸದರು ಹಾಗೂ ಶಾಸಕರು ರೈತರ ಸಮಸ್ಯೆಗಳ ಕುರಿತು ಚಕಾರ ಎತ್ತುತ್ತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ದುಡ್ಡು ಕೊಟ್ಟರೂ ವಿದ್ಯುತ್ ಸಿಗುತ್ತಿಲ್ಲ ಎಂದು ಬೇಜವಬ್ದಾರಿಯಾಗಿ ಮಾತನಾಡುತ್ತಾರೆ. ಪಕ್ಕದ ರಾಜ್ಯಗಳಲ್ಲಿ ಹೇಗೆ ವಿದ್ಯುತ್ ಸಿಗುತ್ತಿದೆ. ಈಗಾಗಿ ಸರ್ಕಾರದ ವಿರುದ್ಧ ಚಳುವಳಿ ರೂಪಿಸಲಾಗುತ್ತಿದೆ ಎಂದರು.

    ಗೋಷ್ಠಿಯಲ್ಲಿ ರಾಜ್ಯ ರೈತ ಸಂಘದ ಸಂಘಟನಾ ಕಾರ್ಯದರ್ಶಿ ಗೌಡಳ್ಳಿ ಸೋಮಣ್ಣ, ರೈತ ಮುಖಂಡ ರಘು, ಪಾಳ್ಯ ಸಿದ್ದರಾಜನಾಯ್ಕ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts