More

    ಸಭೆಗೆ ವಿವಿಧ ಇಲಾಖೆ ಅಧಿಕಾರಿಗಳು ಗೈರು

    ಚಾಮರಾಜನಗರ: ಪಂಚಾಯಿತಿ ಅಭಿವೃದ್ದಿ ಸಭೆಗೆ ಅಧಿಕಾರಿಗಳು ಭಾಗವಹಿಸದಿದ್ದರೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಭಿವೃದ್ದಿ ಹೇಗೆ ಸಾಧ್ಯವಾಗುತ್ತದೆ ಎಂದು ಗ್ರಾ.ಪಂ.ಅಧ್ಯಕ್ಷ ನಟರಾಜು ಅಸಮಾಧಾನ ಹೊರಹಾಕಿದರು.

    ತಾಲೂಕಿನ ಚಂದಕವಾಡಿಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಗುರುವಾರ ಆಯೋಜಿಸಿದ್ದ ಗ್ರಾಮ ಪಂಚಾಯಿತಿಯ ಮೊದಲನೇ ತ್ರೈಮಾಸಿಕ, ಕರ್ನಾಟಕ ಅಭಿವೃದ್ದಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

    ಚಂದಕವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಅಭಿವೃದ್ದಿಗೆ ಅಧಿಕಾರಿಗಳ ಸಹಕಾರ ಅಗತ್ಯವಾಗಿದೆ. ಪ್ರಗತಿ ಪರಿಶೀಲನಾ ಸಭೆಯಲ್ಲಿ ತಾಲೂಕು ಮಟ್ಟದ ಸುಮಾರು 24 ಇಲಾಖೆಯ ಅಧಿಕಾರಿಗಳು ಭಾಗವಹಿಸಬೇಕಿತ್ತು. ಆದರೆ ಇದರಲ್ಲಿ ಕೇವಲ 9 ಇಲಾಖೆಯ ಅಧಿಕಾರಿಗಳು ಮಾತ್ರ ಭಾಗವಹಿಸಿದ್ದಾರೆ. ಈಗಾದರೇ ಅಭಿವೃದ್ಧಿ ಹೇಗೆ ಸಾಧ್ಯವಾಗುತ್ತದೆ. ಈ ಸಭೆಗೆ ಗೈರಾಗಿರುವ ಅಧಿಕಾರಿಗಳು ಮುಂದಿನ ಕೆಡಿಪಿ ಸಭೆಗೂ ಗೈರಾದರೆ ಅಂತವರ ವಿರುದ್ದ ಶಿಸ್ತುಕ್ರಮ ಕೈಗೊಳ್ಳುವಂತೆ ಮೇಲಾಧಿಕಾರಿಗಳಿಗೆ ಪತ್ರ ಬರೆಯುವುದಾಗಿ ಎಚ್ಚರಿಸಿದರು.

    ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಗ್ರಾಮಗಳಲ್ಲಿ ಗ್ರಂಥಾಲಯ ತೆರೆಯುವ ಮೂಲಕ ವಿದ್ಯಾರ್ಥಿಗಳ ಹೆಚ್ಚಿನ ಓದಿಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಸದಸ್ಯ ಮಹೇಶ್ ಸಭೆ ಗಮನಕ್ಕೆ ತಂದರು. ಈ ವೇಳೆ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಎಂ.ಸಿದ್ದರಾಜು ಪ್ರತಿಕ್ರಿಯಿಸಿ ಜಿಲ್ಲಾ ಗ್ರಂಥಾಲಯ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಿ ಕ್ರಮಕೈಗೊಳ್ಳುವುದಾಗಿ ಹೇಳಿದರು.
    ಗ್ರಾಮಗಳಲ್ಲಿ ಯಾವುದೇ ಅಕ್ರಮ ಚಟುವಟಿಗಳು, ಗಲಭೆ ಇದ್ದರೆ ನಮಗೆ ಮಾಹಿತಿ ನೀಡಿದರೆ ತಡೆಗಟ್ಟಲು ಸಹಕರಿಯಾಗುತ್ತದೆ ಎಂದು ಇನ್ಸ್‌ಪೆಕ್ಟರ್ ನಾಗಮ್ಮ ತಿಳಿಸಿದರು.

    ಸಭೆಯಲ್ಲಿ ಉಪಾಧ್ಯಕ್ಷೆ ಆರ್.ರಾಜೇಶ್ವರಿ, ಸದಸ್ಯರಾದ ಪುಟ್ಟಸ್ವಾಮಿ, ಸಂತೋಷ್, ಚಿನ್ನಸ್ವಾಮಿ, ರಾಜೇಂದ್ರ, ಬೇಬಿಜಾನ್, ಮಹೇಶ್ವರಿ, ವರಲಕ್ಷ್ಮೀ, ಜಿ.ನವೀನ , ಗಂಗಮ್ಮ ಹಾಗೂ ಇತರರು ಭಾಗವಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts