ತಲೆಮೇಲೆ ಐಸ್ ಇಟ್ಟುಕೊಂಡು ಪ್ರತಿಭಟನೆ

21chn12
Published on

ಚಾಮರಾಜನಗರ : ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.

ನಗರದ ಶ್ರೀಚಾಮರಾಜೇಶ್ವರ ಉದ್ಯಾನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ತಟ್ಟೆಯಲ್ಲಿ ಐಸ್ ಹಾಕಿ ತಲೆ ಮೇಲೆ ಇಟ್ಟುಕೊಂಡು ಶ್ರೀಭುವನೇಶ್ವರಿ ವೃತ್ತದವರೆಗೆ ಮೆರವಣಿಗೆ ಮಾಡಿದರು.

ಪ್ರತಿಭಟನೆ ನೇತೃತ್ವ ವಹಿಸಿದ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ರಾಜ್ಯ ಸರ್ಕಾರ ತಮಿಳುನಾಡು ಒತ್ತಡಕ್ಕೆ ಮಣಿದು, ಕಾವೇರಿ ನ್ಯಾಯಾಧೀಕರಣ ತಮಿಳುನಾಡಿನ ಏಜೆಂಟ್ ರೀತಿ ವರ್ತನೆ ಮಾಡುತ್ತಿದೆ. ನಮ್ಮ ನೀರಿಗೆ ತೊಂದರೆ ಉಂಟು ಮಾಡುತ್ತಿದೆ. ಇದನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ಸತತವಾಗಿ ಕಳೆದ 38 ದಿನಗಳಿಂದ ವಿನೂತನ ಪ್ರತಿಭಟನೆ ನಡೆಸಿಕೊಂಡು ಬಂದಿದೆ ಎಂದರು.

ಪ್ರತಿಭಟನೆಯಲ್ಲಿ ಶಾ.ಮುರಳಿ, ಪಣ್ಯದಹುಂಡಿ ರಾಜು, ಅಂಬೇಡ್ಕರ್ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಸಿ.ಕೆ.ಮಂಜುನಾಥ್, ಚಾ.ವೆಂ.ರಾಜ್ ಗೋಪಾಲ್, ನಿಜಧ್ವನಿ ಗೋವಿಂದರಾಜು, ನಂಜುಂಡಶೆಟ್ಟಿ, ಗು.ಪುರುಷೋತ್ತಮ್, ಚಾ.ಹ.ರಾಮು, ತಾಂಡವಮೂರ್ತಿ, ರಾಜಪ್ಪ,ಲಿಂಗರಾಜು, ವೀರಭದ್ರ, ಸೋಮವಾರಪೇಟೆ ಮಂಜು ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net