More

    ಅರಸೊತ್ತಿಗೆ ವೈಭವ ಧಿಕ್ಕರಿಸಿದ ಅಕ್ಕಮಹದೇವಿ

    ಚಾಮರಾಜನಗರ: ಕನ್ನಡದ ಮೊದಲ ವಚನಗಾರ್ತಿ ವೀರ ವೈರಾಗ್ಯನಿಧಿ ಅಕ್ಕಮಹಾದೇವಿ ಎಂದು ಹಳ್ಳಿಕೆರೆಹುಂಡಿ ಜೆಎಸ್‌ಎಸ್ ಪ್ರೌಢಶಾಲೆ ಶಿಕ್ಷಕ ಶಿವಕುಮಾರಸ್ವಾಮಿ ತಿಳಿಸಿದರು.

    ತಾಲೂಕಿನ ಹಳ್ಳಿಕೆರೆಹುಂಡಿಯ ಜೆಎಸ್‌ಎಸ್ ಪ್ರೌಢಶಾಲೆಯಲ್ಲಿ ಜೆ.ಎಸ್.ಬಿ ಪ್ರತಿಷ್ಠಾನ ಶುಕ್ರವಾರ ಆಯೋಜಿಸಿದ್ದ ‘ಕನ್ನಡ ಮಾಸಾಚರಣೆ 2023’ ಕಾರ್ಯಕ್ರಮವನ್ನು ಕನ್ನಡತಾಯಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

    ಅಕ್ಕಮಹಾದೇವಿ ವಚನ ಸಾಹಿತ್ಯದ ಪ್ರಮುಖರಲ್ಲೊಬ್ಬರು. ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರಿವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸ ಬಹುದಾಗಿದೆ ಎಂದರು.

    ಸಾನ್ನಿಧ್ಯ ವಹಿಸಿದ್ದ ಬಸವಯೋಗಿಪ್ರಭು ಸ್ವಾಮೀಜಿ ಮಾತನಾಡಿ, ಅಕ್ಕಮಹಾದೇವಿಯವರಿಗೆ ಅರಸೊತ್ತಿಗೆ ವೈಭವ ಇದ್ದರೂ ಅದನ್ನು ಧಿಕ್ಕರಿಸಿ ಮಹಿಳೆಯರ ಸಬಲೀಕರಣಕ್ಕಾಗಿ ಕ್ರಾಂತಿ ನಡೆಸಿದರು. ಜೀವನದಲ್ಲಿ ನಿಂದನೆ, ಟೀಕೆ ಬಂದರೂ ಹೇಗೆಲ್ಲ ಎದುರಿಸಬೇಕು ಎನ್ನುವುದು ಅಕ್ಕಮಹಾದೇವಿ ಅವರು ತಮ್ಮ ವಚನದಲ್ಲಿ ಬಹಳ ಸುಂದರವಾಗಿ ವಿವರಿಸಿದ್ದಾರೆ. ಜೀವನ ಸಾರ್ಥಕತೆಗೆ ಎಲ್ಲ ಮಹಿಳೆಯರು ಅಕ್ಕನ ವಚನ ತಪ್ಪದೇ ಪಠಣ ಮಾಡಬೇಕು ಎಂದು ತಿಳಿಸಿದರು.

    ಜೆ.ಎಸ್.ಬಿ ಪ್ರತಿಷ್ಠಾನದ ಅಧ್ಯಕ್ಷ ಎಸ್.ಶಶಿಕುಮಾರ್ ಕಾರ್ಯಕ್ರಮ ನಿಮಿತ್ತ ಶಾಲೆಯಲ್ಲಿ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಕನ್ನಡ ಪುಸ್ತಕಗಳ ಬಹುಮಾನ, ಜತೆಗೆ ಶಾಲೆಯ ಎಲ್ಲ ಮಕ್ಕಳಿಗೆ ಕನ್ನಡ ಕಿರುಪುಸ್ತಕ ನೀಡಿದರು. ಶಿಕ್ಷಕರಾದ ಸಿದ್ದಲಿಂಗಪ್ಪ, ಗಣೇಶ, ವೇದಾವತಿ ಮತ್ತು ಸಿಬ್ಬಂದಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts