More

    ಸಾಂಕ್ರಾಮಿಕ ರೋಗ ತಡೆಗೆ ಸಹಕರಿಸಿ

    ಚಾಮರಾಜನಗರ: ಗ್ರಾಮೀಣ ಪ್ರದೇಶದಲ್ಲಿ ಜನರು ತಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಕರೊನಾದಂತಹ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಬಹುದು ಎಂದು ಪುಣಜನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿವಿಬಾಯಿ ಗಣೇಶ್ ಹೇಳಿದರು.

    ತಾಲೂಕಿನ ಮೂಕನಪಾಳ್ಯ ಗ್ರಾಮದಲ್ಲಿ ಬುಧವಾರ ಆಯೋಜಿಸಿದ್ದ ‘ವೈದ್ಯರ ನಡೆ ಹಳ್ಳಿಯ ಮನೆ ಕಡೆ’ ಆರೋಗ್ಯ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. ಕರೊನಾ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಈಗಾಗಲೇ ಪುಣಜನೂರು ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಗ್ರಾಮಗಳಲ್ಲಿ ಬೇಡಗುಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರ ತಂಡದ ಕಾಡಂಚಿನ ಪ್ರತಿಯೊಂದು ಗ್ರಾಮದ ಮನೆ ಮನೆಗೆ ಭೇಟಿ ನೀಡಿ ಪ್ರತಿಯೊಬ್ಬರ ಆರೋಗ್ಯ ತಪಾಸಣೆ ನಡೆಸುತ್ತಿದೆ. ರಕ್ತದೊತ್ತಡ, ಕೆಮ್ಮು, ನೆಗಡಿ ಇನ್ನಿತರ ಸಮಸ್ಯೆಗಳು ಕಂಡು ಬಂದಲ್ಲಿ ಅಂತಹವರು ಕಡ್ಡಾಯವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

    ವೈದ್ಯಾಧಿಕಾರಿ ಡಾ.ಗುಂಡಪ್ಪ ಮಾತನಾಡಿ, ಪುಣಜನೂರು, ಪುಣಜನೂರು ಗೇಟ್, ಬಾನವಾಡಿ ಸೇರಿದಂತೆ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ತಪಾಸಣೆ ನಡೆಸಲಾಗುವುದು. ಜ್ವರ, ಶೀತ ಇನ್ನಿತರ ಸಮಸ್ಯೆಗಳು ಕಂಡುಬಂದಲ್ಲಿ ತಕ್ಷಣವೇ ಆರೋಗ್ಯಾಧಿಕಾರಿಗಳನ್ನು ಸಂಪರ್ಕಿಸಿ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

    ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರಾಚಪ್ಪ, ಸದಸ್ಯರಾದ ಮಹೇಶ್‌ನಾಯಕ, ಮಾಜಿ ಉಪಾಧ್ಯಕ್ಷ ಶಿವಾಜಿ ನಾಯಕ, ಸಿಎಚ್‌ಓ ಮಹೇಶ್, ಪಿಡಿಒ ಸಿದ್ದರಾಜು, ಬಿಲ್ ಕಲೆಕ್ಟರ್ ಮಹದೇವನಾಯಕ, ವಾಟರ್‌ಮನ್ ಶಿವನಾಯಕ, ರಾಜೇಶ್, ಲ್ಯಾಬ್‌ಟೆಕ್ನಿಷಿಯನ್ ತೈರೋಜ್‌ಖಾನ್, ಶುಶ್ರೂಷಕಿ ಮಂಗಳಾ, ಆಶಾ ಕಾರ್ಯಕರ್ತೆಯರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts