More

    ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪಿಸಲು ಅರ್ಜಿ ಆಹ್ವಾನ

    ಚಾಮರಾಜನಗರ: 2023-24ನೇ ಸಾಲಿನ ಕೃಷಿ ಯಂತ್ರೋಪಕರಣಗಳನ್ನು ರೈತರಿಗೆ ಬಾಡಿಗೆ ಆಧಾರದಲ್ಲಿ ಒದಗಿಸುವಂತೆ ಹೈಟೆಕ್ ಹಾರ್ವೆಸ್ಟರ್ ಹಬ್ ಅನ್ನು ಸ್ಥಾಪಿಸಲು ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ ವೈಯಕ್ತಿಕ ಫಲಾನುಭವಿ, ಸಂಘ-ಸಂಸ್ಥೆಗಳು ಚಾಲ್ತಿಯಲ್ಲಿರುವ ಕೃಷಿ ಯಂತ್ರಧಾರೆ ಕೇಂದ್ರಗಳು, ಸೇವಾಧಾರ ಸಂಸ್ಥೆಗಳು, ಕೃಷಿ ಯಂತ್ರೋಪಕರಣಗಳ ಬ್ಯಾಂಕ್ ಹಾಗೂ ನೋಂದಾಯಿತ ಸಂಘ-ಸಂಸ್ಥೆಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ನಿಗದಿತ ಅರ್ಜಿ ನಮೂನೆ, ಸಂಸ್ಥೆ ನೋಂದಾಯಿಸಿದ ಪ್ರಮಾಣ ಪತ್ರ, ಗುರುತಿನ ಪತ್ರ, ಬ್ಯಾಂಕ್ ಪಾಸ್‌ಬುಕ್ ಪ್ರತಿ, 20ರೂ. ಛಾಪಾ ಕಾಗದದ ಮೇಲೆ ಹಬ್ಅನ್ನು ಪರಬಾರೆ ಮಾಡುವುದಿಲ್ಲ ಎಂದು ಮುಚ್ಚಳಿಕೆ ಪತ್ರ, 2 ವರ್ಷಗಳ ಕಾಲ ಲೆಕ್ಕ ಪರಿಶೋಧನಾ ಪತ್ರ ಸಲ್ಲಿಸಬೇಕು.

    ಅರ್ಜಿಯನ್ನು ಫೆ. 15ರೊಳಗೆ ಚಾಮರಾಜನಗರ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಲು ಸಹಾಯಕ ಕೃಷಿ ನಿರ್ದೇಶಕ ಕೆ.ಬಿ.ಸಂದೀಪ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts