More

    ಮಠಗಳು ಹಸಿವುಮುಕ್ತ ಸಮಾಜ ನಿರ್ಮಾಣದ ತಾಣಗಳು

    ಯಳಂದೂರು: ಮಠಗಳು ಹಲವು ಶತಮಾನಗಳಿಂದಲೂ ಸಮಾಜದ ಸರ್ವ ಜನಾಂಗದ ಒಳಿತಿಗಾಗಿ ಶ್ರಮಿಸುತ್ತಿದ್ದು, ಇವು ಬಡವರ ಹಸಿವು ನೀಗಿಸಿ ನಿರ್ಗತಿಕರಿಗೆ ವಸತಿ ಒದಗಿಸುವ ಆಶ್ರಯತಾಣಗಳಾಗಿವೆ ಎಂದು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.

    ತಾಲೂಕಿನ ಗೌಡಹಳ್ಳಿ ಗ್ರಾಮದಲ್ಲಿ ಬುಧವಾರ ಆಯೋಜಿಸಿದ್ದ ಗೌಡಹಳ್ಳಿ ಮಠದ ಮಹಾಂತ ಸ್ವಾಮೀಜಿ ಹಾಗೂ ಸಿದ್ಧಲಿಂಗ ಸ್ವಾಮೀಜಿ ಸಂಸ್ಮರಣ ಮಹೋತ್ಸವ ಮತ್ತು ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಮನುಕುಲದ ಒಳಿತಿಗಾಗಿ ಮಠದ ಪರಂಪರೆ ಅಪಾರ ಕೊಡುಗೆ ನೀಡಿದೆ. ಎಲ್ಲ ವರ್ಗದ ಜನರಿಗೂ ಊಟ, ವಸತಿ, ಶಿಕ್ಷಣ ಹಾಗೂ ಸಂಸ್ಕಾರಯುತ ಜೀವನ ನಡೆಸಲು ಪ್ರೇರಣೆ ನೀಡಿದೆ. ಸುಸಂಸ್ಕೃತ ವ್ಯಕ್ತಿಯಾಗಿ ರೂಪಿಸುವಲ್ಲಿ ಇವು ಪ್ರಮುಖ ಪಾತ್ರ ವಹಿಸಿವೆ. ಸಮಾಜವನ್ನು ತಿದ್ದುವ ಕೆಲಸ ಮಾಡುತ್ತಿವೆ. ಬಸವಣ್ಣ ರೂಪಿಸಿದ ಮಹಾಮನೆಯ ಕಲ್ಪನೆಯನ್ನು ಸಾಕಾರಗೊಳಿಸುವಲ್ಲಿ ಇವುಗಳ ಪಾತ್ರ ಹಿರಿದಾಗಿದೆ. ಇಂತಹ ಪರಂಪರೆಯನ್ನು ಹೊಂದಿರುವ ಮಠಗಳು ನೆಮ್ಮದಿಯ ತಾಣಗಳಾಗಿವೆ ಎಂದರು.

    ಇದೇ ಸಂದರ್ಭದಲ್ಲಿ ಮಠದ ನೂತನ ಬಸವ ಭವನವನ್ನು ಉದ್ಘಾಟಿಸಿದರು. ಇದಕ್ಕೂ ಮುಂಚೆ ಗ್ರಾಮದ ಬಸ್ ನಿಲ್ದಾಣದಿಂದ ಮಠದವರೆಗೆ ಪೂರ್ಣಕುಂಭ ಹೊತ್ತ ಮಹಿಳೆಯರು ಹಾಗೂ ವಾದ್ಯಗೋಷ್ಠಿ ಸಮೇತ ಸುತ್ತೂರು ಶ್ರೀಗಳನ್ನು ಮೆರವಣಿಗೆ ಮೂಲಕ ಗ್ರಾಮಕ್ಕೆ ಕರೆ ತರಲಾಯಿತು.

    ಶಾಸಕ ಎ.ಆರ್.ಕೃಷ್ಣಮೂರ್ತಿ, ಮಲ್ಲನಮೂಲೆ ಮಠದ ಚೆನ್ನಬಸವ ಸ್ವಾಮೀಜಿ, ಹರವೆ ಸರ್ಪಭೂಷಣ ಸ್ವಾಮೀಜಿ, ವಾಟಾಳು ಮಠದ ಸಿದ್ದಲಿಂಗಶಿವಾಚಾರ್ಯ ಸ್ವಾಮೀಜಿ ಸೇರಿದಂತೆ ವಿವಿಧ ಸ್ವಾಮೀಜಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts