More

  ಅಭಿವೃದ್ದಿ ಕಾಮಗಾರಿಗೆ ಶಾಸಕರಿಂದ ಗುದ್ದಲಿಪೂಜೆ

  ಚಾಮರಾಜನಗರ: ನಗರಸಭೆ ವ್ಯಾಪ್ತಿಯ ಗಾಳೀಪುರ 3 ನೇ ವಾರ್ಡಿನಲ್ಲಿ 5 ಕೋಟಿ ರೂ.ವೆಚ್ಚದಲ್ಲಿ ಸಿಸಿರಸ್ತೆ ಮತ್ತು ಚರಂಡಿ ಅಭಿವೃದ್ದಿ ಕಾಮಗಾರಿಗೆ ಎಂಎಸ್‌ಐಎಲ್ ನಿಗಮದ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಶುಕ್ರವಾರ ಗುದ್ದಲಿಪೂಜೆ ನೆರವೇರಿಸಿದರು.

  ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗಾಳೀಪುರ ಬಡಾವಣೆಯಲ್ಲಿ ವಾಸಮಾಡುವ ನಿವಾಸಿಗಳಿಗೆ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 5 ಕೋಟಿ ರೂ. ಮಂಜೂರಾಗಿದ್ದು, ಸಂಬಂಧಪಟ್ಟ ಕಾಮಗಾರಿ ನಿರ್ವಹಣೆ ಗುತ್ತಿಗೆದಾರರು ತ್ವರಿತಗತಿಯಲ್ಲಿ ಕಾಮಗಾರಿ ಆರಂಭಿಸಬೇಕು. ನಿವಾಸಿಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕು, ಗುಣಮಟ್ಟದ ಕಾಮಗಾರಿಗೆ ಆಧ್ಯತೆ ನೀಡಬೇಕು ಎಂದು ಸೂಚನೆ ನೀಡಿದರು.

  ನಗರಸಭೆ ಸದಸ್ಯರಾದ ಎಂ.ಮಹೇಶ್, ಮಹಮದ್ ಅಮಿಕ್, ಅಬ್ರಾರ್ ಅಹಮದ್, ಕಲೀಲ್‌ವುಲ್ಲಾ, ನಗರಸಭೆ ಮಾಜಿ ಸದಸ್ಯ ಮಹಮದ್ ಅಸ್ಗರ್ (ಮುನ್ನಾ), ನಿರ್ಮಿತಿಕೇಂದ್ರದ ಎಂಜಿನಿಯರ್ ಭೀಮಸಾಗರ್, ಸಿಬ್ಬಂದಿ ಸೋಮಶೇಖರ್ ಸೇರಿದಂತೆ ಬಡಾವಣೆ ನಿವಾಸಿಗಳು, ಮುಖಂಡರು ಹಾಜರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts