More

  ಸಾಮಾಜಿಕ ಬದ್ಧತೆಯನ್ನು ಅರಿತಿದ್ದ ಅಪ್ಪು

  ಚಾಮರಾಜನಗರ: ಸಾರ್ವಜನಿಕರ ಕ್ಷೇತ್ರದಲ್ಲಿ ಯಾರಿಗೂ ತಿಳಿಯದಂತೆ ಅಪಾರವಾದ ಸೇವೆ ಸಲ್ಲಿಸಿದ್ದ ಪುನೀತ್ ರಾಜ್‌ಕುಮಾರ್ ಸಾಮಾಜಿಕ ಬದ್ಧತೆಯನ್ನು ಅರಿತುಕೊಂಡಿದ್ದರು ಎಂದು ಭಗತ್‌ಸಿಂಗ್ ಯುವಸೇನೆ ಅಧ್ಯಕ್ಷ ಕಾಂತರಾಜ್ ಹೇಳಿದರು.

  ತಾಲೂಕಿನ ಕೋಡಿಮೋಳೆ ಗ್ರಾಮದಲ್ಲಿ ಭಗತ್ ಸೇನೆ ವತಿಯಿಂದ ಕರ್ನಾಟಕ ರತ್ನ ದಿ.ಪುನೀತ್ ರಾಜಕುಮಾರ್ ಅವರ ಜನ್ಮದಿನಾಚರಣೆ ಅಂಗವಾಗಿ ಭಾನುವಾರ ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

  ಡಾ.ಪುನೀತ್‌ರಾಜ್‌ಕುಮಾರ್ ಜನ್ಮದಿನವನ್ನು ಸ್ಫೂರ್ತಿ ದಿನವೆಂದು ಆಚರಿಸಲಾಗುತ್ತಿದೆ. ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೆ ಸಾರ್ವಜನಿಕ ಕ್ಷೇತ್ರದಲ್ಲಿ ಯಾರಿಗೂ ತಿಳಿಯದ ಹಾಗೆ ಅಪಾರ ಸೇವೆಯನ್ನು ಸಲ್ಲಿಸಿದ್ದರು. ಅವರ ಆದರ್ಶನಿಯವಾದ ಬದುಕನ್ನು ಹಾಗೂ ಸೇವಾ ಮನೋಭಾವನೆಯನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದರು.

  ಈ ಸಂದರ್ಭದಲ್ಲಿ ನಾಗೇಶ್ (ಅಪ್ಪು), ಶಿವು, ಸಿದ್ದರಾಜು, ಪ್ರಜ್ವಲ್, ಮನು ಇತರರು ಹಾಜರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts