More

    ಎನ್‌ಎಸ್‌ಯುಐನಿಂದ ಪ್ರತಿಭಟನೆ

    ಚಾಮರಾಜನಗರ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಯುಐ) ಸದಸ್ಯರು ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.


    ನಗರದ ಪ್ರಥಮ ದರ್ಜೆ ಕಾಲೇಜಿನಿಂದ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಜಿಲ್ಲಾಡಳಿತ ಭವನದ ಆವರಣದಲ್ಲಿ ಜಮಾಯಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.


    ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್‌ಪಾಸ್, ಸಮಯಕ್ಕೆ ಸರಿಯಾಗಿ ಸಾರಿಗೆ ವ್ಯವಸ್ಥೆ, ಶಾಲಾ- ಕಾಲೇಜುಗಳ ಮುಂದೆ ಬಸ್ ಸ್ಟಾೃಂಡ್ ನಿರ್ಮಾಣ, ವಿದ್ಯಾರ್ಥಿ ವೇತನ ಬಿಡುಗಡೆ, ಪರೀಕ್ಷಾ ಹಾಗೂ ಪ್ರವೇಶ ಶುಲ್ಕ ಕಡಿತ, ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ ಮಾಡಬೇಕೆಂಬ ಇತರ ಬೇಡಿಕೆ ತಕ್ಷಣ ಈಡೇರಿಸಬೇಕೆಂದು ಒತ್ತಾಯಿಸಿದರು.


    ಪರೀಕ್ಷಾ ಶುಲ್ಕ ತಕ್ಷಣ ಬಿಡುಗಡೆ ಮಾಡಬೇಕು. ವಿದ್ಯಾರ್ಥಿಗಳಲ್ಲಿ ಉತ್ತಮ ಸೌಲಭ್ಯ ನೀಡಬೇಕು. ಗ್ರಾಮೀಣ ವಿದ್ಯಾರ್ಥಿಗಳಿಗೆ ವಿಶೇಷ ಉತ್ತೇಜನ ಮತ್ತು ಶಾಲಾ- ಕಾಲೇಜು ಆವರಣದಲ್ಲಿ ಸುಸಜ್ಜಿತ ಶೌಚಗೃಹ ನಿರ್ಮಾಣ, ಕುಡಿಯುವ ನೀರಿನ ಸಂಪರ್ಕ ಕಲ್ಪಿಸಬೇಕೆಂದು ಆಗ್ರಹಿಸಿದರು.


    ಈ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಎನ್‌ಎಸ್‌ಯುಐ ವತಿಯಿಂದ ಡಿ.17ರಂದು ರಾಜ್ಯಾದ್ಯಂತ ವಿವಿಗಳು ಮತ್ತು ಕಾಲೇಜು ಬಂದ್ ಕರೆ ನೀಡಲಾಗಿತ್ತು. ವಿದ್ಯಾರ್ಥಿಗಳಿಗೆ ಆಗುತ್ತಿರುವ ಕುಂದು-ಕೊರತೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ. ಇವೆಲ್ಲವನ್ನೂ ಮನಗಂಡು ತಕ್ಷಣ ವಿದ್ಯಾರ್ಥಿಗಳ ಹಿತವನ್ನು ಕಾಯಬೇಕೆಂದು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಸಂಘಟನೆಯ ರಾಜ್ಯ ಕಾರ್ಯದರ್ಶಿ ಸ್ವಾಮಿ, ಜಿಲ್ಲಾಧ್ಯಕ್ಷ ಮೋಹನ್, ಕಾರ್ಯದರ್ಶಿಗಳಾದ ದಿಲೀಪ್, ಮಮತಾ, ನಿತಿನ್, ನಾಗಲಾಂಬಿಕಾ, ಚಂದನ್, ಯೋಗೇಶ್ ಮತ್ತು ಇತರರು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts