More

    ಚಾಮರಾಜನಗರ ಜಿಲ್ಲಾಸ್ಪತ್ರೆ ಆಕ್ಸಿಜನ್ ದುರಂತ: ಜಿಲ್ಲಾಧಿಕಾರಿ ಎಂ.ಆರ್​. ರವಿ ವರ್ಗಾವಣೆ

    ಚಾಮರಾಜನಗರ: ಜಿಲ್ಲಾಸ್ಪತ್ರೆ ಆಕ್ಸಿಜನ್​ ದುರಂತ ಪ್ರಕರಣ ಸಂಬಂಧ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ಎನ್. ವೇಣುಗೋಪಾಲ್ ಗೌಡ ನೇತೃತ್ವದ ಕಾನೂನು‌ ಸೇವೆಗಳ ಪ್ರಾಧಿಕಾರದ ಸಮಿತಿ ವರದಿ ನೀಡಿದ ಕೆಲವೇ ದಿನಗಳಲ್ಲಿ ಜಿಲ್ಲಾಧಿಕಾರಿ ಡಾ. ಎಂ.ಆರ್​. ರವಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಗುರುವಾರ (ಮೇ 20) ಆದೇಶ ಹೊರಡಿಸಿದೆ.

    ರವಿ ಅವರನ್ನು ಕೇವಲ ವರ್ಗಾವಣೆಯಷ್ಟೇ ಮಾಡಲಾಗಿದ್ದು, ಬೇರೆ ಯಾವುದೇ ಸ್ಥಳವನ್ನು ಇನ್ನು ಸರ್ಕಾರ ಇನ್ನು ಸೂಚಿಸಿಲ್ಲ. ಇನ್ನು ಚಾಮರಾಜನಗರಕ್ಕೆ ಸತೀಶ್​ ಅವರನ್ನು ಜಿಲ್ಲಾಧಿಕಾರಿಯನ್ನಾಗಿ ಸರ್ಕಾರ ನೇಮಿಸಿದೆ ಎಂದು ತಿಳಿದುಬಂದಿದೆ.

    ಮೇ 2ರಂದು ಆಮ್ಲಜನಕ ಸಿಗದೇ ಉಸಿರಾಟದ ಸಮಸ್ಯೆ ಉಂಟಾಗಿ 20ಕ್ಕೂ ಹೆಚ್ಚು ಕರೊನಾ ರೋಗಿಗಳು ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಈ ಸುದ್ದಿ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು.

    ಮೈಸೂರು ಜಿಲ್ಲಾಧಿಕಾರಿ ಆಕ್ಸಿಜನ್​ ಪೂರೈಕೆ ತಡೆದಿದ್ದೇ ದುರಂತಕ್ಕೆ ಕಾರಣ ಎಂದು ಜಿಲ್ಲಾಧಿಕಾರಿ ರವಿ ಗಂಭೀರ ಆರೋಪ ಮಾಡಿದ್ದರು. ಮೈಸೂರು ಡಿಸಿ ರೋಹಿಣಿ ಸಿಂಧೂರಿ ಸಹ ಆರೋಪವನ್ನು ಅಲ್ಲಗೆಳೆದಿದ್ದರು. ಇದಾದ ಬಳಿಕ ಪ್ರಕರಣವನ್ನು ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು.

    ರೋಹಿಣಿ ಸಿಂಧೂರಿಗೆ ಕ್ಲೀನ್​ಚಿಟ್​
    ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣಕ್ಕೆ ಆಕ್ಸಿಜನ್ ಕೊರತೆಯೇ ಕಾರಣ. ಮೇ 2ರ ರಾತ್ರಿ 11 ಗಂಟೆಯಿಂದ ಮೇ 3ರ ಮಧ್ಯರಾತ್ರಿವರೆಗೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜ‌ನ್ ಲಭ್ಯವಿರಲಿಲ್ಲ. ಸಂದರ್ಭಕ್ಕೆ ತಕ್ಕಂತೆ ನಾಯಕತ್ವ ಮತ್ತು ಕ್ರಿಯಾಶೀಲತೆ ತೋರಿಸುವಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ವಿಫಲರಾಗಿದ್ದಾರೆ. ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಆಕ್ಸಿಜನ್ ಸಾಗಿಸಲು ಯಾವುದೇ ತಡೆವೊಡಿಲ್ಲ ಎಂದು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ಎನ್. ವೇಣುಗೋಪಾಲ್ ಗೌಡ ನೇತೃತ್ವದ ಕಾನೂನು‌ ಸೇವೆಗಳ ಪ್ರಾಧಿಕಾರದ ಸಮಿತಿ ವರದಿ ನೀಡುವ ಮೂಲಕ ರೋಹಿಣಿ ಸಿಂಧೂರಿಗೆ ಕ್ಲೀನ್​ಚಿಟ್​ ನೀಡಿದೆ.

     

    ಚಾಮರಾಜನಗರ ಆಕ್ಸಿಜನ್​ ದುರಂತ: ರೋಹಿಣಿ ಸಿಂಧೂರಿ ಸೇಫ್​​, ಕೊನೆಗೂ ಆ ದಿನದ ರಹಸ್ಯ ಬಿಚ್ಚಿಟ್ಟ ಸಮಿತಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts