23.2 C
Bangalore
Saturday, December 14, 2019

ವಿಚಾರಣಾಧೀನ ಕೈದಿಗಳಿಗೆ ಕಾನೂನು ಅರಿವು

Latest News

ಆರ್‌ಎಫ್‌ಐಡಿ ಸ್ಟಿಕರ್​ಗಳ ಕೊರತೆ: ಫಾಸ್ಟ್ಯಾಗ್​ ಅಳವಡಿಕೆ ಗಡುವನ್ನು ಮತ್ತೊಮ್ಮೆ ವಿಸ್ತರಣೆ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ರಾಷ್ಟ್ರಿಯ ಹೆದ್ದಾರಿಯಲ್ಲಿನ ಟೋಲ್​ಪ್ಲಾಜಾಗಳಲ್ಲಿ ಫಾಸ್ಟ್ಯಾಗ್​ ಮೂಲಕ ಟೋಲ್​ ಶುಲ್ಕ ವಸೂಲಿ ಪ್ರಕ್ರಿಯೆ ಡಿ.1 ರಿಂದ ಪ್ರಾರಂಭವಾಗಬೇಕಿತ್ತು. ಆದರೆ ಆದರೆ, ಎಲ್ಲ ವಾಹನ ಮಾಲೀಕರೂ ಫಾಸ್ಟ್ಯಾಗ್​...

ದಾವಣಗೆರೆ ಲೋಕ ಅದಾಲತ್‌ನಲ್ಲಿ 21 ನ್ಯಾಯಾಧೀಶರು ಭಾಗಿ, 678 ಕೇಸ್ ವಿಲೆ, 7.34 ಕೋಟಿ ಪರಿಹಾರ ಇತ್ಯರ್ಥ

ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸೂಚನೆಯಂತೆ ಜಿಲ್ಲಾದ್ಯಂತ ಶನಿವಾರ ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು. ಜಿಲ್ಲೆಯ...

ಫೆಬ್ರವರಿ 1 ರಂದು ಕೇಂದ್ರ ಬಜೆಟ್​, ಜನವರಿ 31 ರಂದು ಆರ್ಥಿಕ ಸಮೀಕ್ಷೆ ಮಂಡನೆ ಸಾಧ್ಯತೆ

ನವದೆಹಲಿ: ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ 2020-21 ಸಾಲಿನ ಕೇಂದ್ರ ಮುಂಗಡ ಪತ್ರ ಫೆಬ್ರವರಿ 1 ರಂದು ಮಂಡನೆಯಾಗುವ ಸಾಧ್ಯತೆಯಿದೆ. ಅಂತೆಯೇ ಆರ್ಥಿಕ...

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

ಚಾಮರಾಜನಗರ : ಆರೋಪಿಗಳಿಗೆ ಸಂವಿಧಾನದ ಚೌಕಟ್ಟಿನಲ್ಲಿ ನೀಡಿರುವ ಮೂಲಭೂತ ಹಕ್ಕುಗಳ ಬಗ್ಗೆ ತಿಳಿಸುವ ಉದ್ದೇಶದಿಂದ ಕಾನೂನು ಸೇವೆಗಳ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ.ಬಸವರಾಜ ತಿಳಿಸಿದರು.

ನಗರದ ಜಿಲ್ಲಾ ಕಾರಾಗೃಹದಲ್ಲಿ ಆಯೋಜಿಸಿದ್ದ ವಿಚಾರಣಾಧೀನ ಕೈದಿಗಳಿಗೆ ಕಾನೂನು ಸೇವೆಗಳ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಜೈಲಿನಲ್ಲಿರುವ ವಿಚಾರಣಾಧೀನ ಕೈದಿಗಳಿಗೆ ಕಾನೂನಿನ ಕುರಿತು ಅರಿವು ಮೂಡಿಸಲು 2 ತಿಂಗಳ ಕಾಲ ಕಾನೂನು ಸೇವೆಗಳ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಇಬ್ಬರು ವಕೀಲರನ್ನು ನೇಮಿಸಲಾಗಿದೆ. ವಕೀಲರು ಕೈದಿಗಳ ಜತೆ ಸಂವಹನ ನಡೆಸಿ ಅವರ ಸಮಸ್ಯೆಗಳನ್ನು ಅರಿತು ಅಗತ್ಯವಿರುವ ಕಾನೂನಿನ ತಿಳಿವಳಿಕೆ ನೀಡುತ್ತಾರೆ ಎಂದರು.

7 ವರ್ಷಕ್ಕಿಂತ ಕಡಿಮೆ ಅವಧಿಯ ಅಪರಾಧಗಳಿಗೆ ಅರ್ಧಕ್ಕಿಂತ ಹೆಚ್ಚಿನ ಅವಧಿವರೆಗೆ ಅಪರಾಧಿಯನ್ನು ನ್ಯಾಯಾಂಗ ಬಂಧನದಲ್ಲಿಟ್ಟುಕೊಳ್ಳುವ ಆಗಿಲ್ಲ. ಇಂತಹ ಸಂದರ್ಭದಲ್ಲಿ ಅಂತಹ ವ್ಯಕ್ತಿಗಳನ್ನು ಗುರುತಿಸಿ ಸೂಕ್ತ ಕಾನೂನು ನೆರವು ಕಲ್ಪಿಸಿ ಜಾಮೀನು ನೀಡುವ ವ್ಯವಸ್ಥೆ ಕಲ್ಪಿಸಲಾಗುವುದು. ಕಾರಾಗೃಹಕ್ಕೆ ನೇಮಕವಾಗಿರುವ ಪ್ಯಾನಲ್ ವಕೀಲರು ತಮ್ಮ ವೃತ್ತಿಧರ್ಮದಡಿ ಕರ್ತವ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಜಿ.ವಿಶಾಲಾಕ್ಷಿ ಮಾತನಾಡಿ, ನ್ಯಾಯಾಲಯವು ಅರ್ಜಿ ವಿಲೇವಾರಿ ಮಾಡುವ ಸಂದರ್ಭದಲ್ಲಿ ಜೈಲಿನಲ್ಲಿರುವವರಿಗೆ ಮಾಹಿತಿ ಇರುವುದಿಲ್ಲ. ಜೈಲಿಗೆ ಇಬ್ಬರು ಪ್ಯಾನಲ್ ವಕೀಲರನ್ನು ನೇಮಕ ಮಾಡಲಾಗಿದ್ದು, ಅವರ ಮೂಲಕ ಆರೋಪಿಗಳಿಗೆ ಬೇಕಿರುವ ಕಾನೂನುಗಳ ಬಗ್ಗೆ ತಿಳಿಸಿಕೊಡಲಾಗುವುದು. ಈ ಅಭಿಯಾನದ ಮೂಲಕ ವಿಚಾರಣಾಧೀನ ಕೈದಿಗಳಿಗೆ ಕಾನೂನಿನ ಕುರಿತು ಅರಿವು ಮೂಡಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್ ಮಾತನಾಡಿ, ಅಪರಾಧಗಳನ್ನು ತಡೆಗಟ್ಟಲು ಹಲವು ಕಠಿಣ ಕಾನೂನುಗಳು ಬಂದಿದ್ದರೂ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದು ವಿಪರ್ಯಾಸ. ಕೈದಿಗಳು ಜೈಲಿನಿಂದ ಹೊರ ಹೋದ ನಂತರ ಉತ್ತಮ ವ್ಯಕ್ತಿಗಳಾಗಿ ಜೀವನ ನಡೆಸಬೇಕು. ಅಪರಾಧಗಳಿಂದ ಹೊರ ಬಂದಾಗ ನೆಮ್ಮದಿಯ ಜೀವನ ನಡೆಸಲು ಸಾಧ್ಯ. ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಕಾನೂನಿನ ಬಗ್ಗೆ ಕನಿಷ್ಟ ಜ್ಞಾನವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಹಿರಿಯ ಸಿವಿಲ್ ನ್ಯಾಯಾಧೀಶ ಉಮೇಶ್, ಜಿಲ್ಲಾ ಕಾರಾಗೃಹದ ಅಧೀಕ್ಷಕಿ ಶಾಂತಶ್ರೀ, ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಅರುಣ್ ಕುಮಾರ್, ಜಿಲ್ಲಾ ಕಾರಾಗೃಹದ ಪ್ಯಾನಲ್ ವಕೀಲರಾದ ಕೆ.ಬಿ.ವೀರಭದ್ರಸ್ವಾಮಿ, ಎ.ಎಸ್.ಮಂಜುನಾಥಸ್ವಾಮಿ ಇತರರಿದ್ದರು.

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...