More

    ಪಿಯುಸಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ತರಬೇತಿ ಅವಶ್ಯ

    ಚಾಮರಾಜನಗರ: ಪದವಿ ಹಾಗೂ ಪಿಯುಸಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಕಂಪ್ಯೂಟರ್ ತರಬೇತಿಯನ್ನು ಪಡೆದು ಉದ್ಯೋಗ ಪಡೆದುಕೊಳ್ಳುವ ಜತೆಗೆ ಸ್ವಂತ ಉದ್ಯೋಗ ಆರಂಭಿಸಿ ಸ್ವಾವಲಂಬನೆ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗಿದೆ ಎಂದು ಶ್ರೀಕಂಪ್ಯೂಟರ್ ತರಬೇತಿ ಕೇಂದ್ರ ಮುಖ್ಯಸ್ಥ ವೆಂಕಟೇಶ್ ತಿಳಿಸಿದರು.

    ನಗರದ ದೇವಾಂಗ ಬೀದಿಯಲ್ಲಿರುವ ಶ್ರೀಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಆಯೋಜಿಸಿದ್ದ 10ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಾಹಿತಿ ತಂತ್ರಜ್ಞಾನ ಬೆಳೆದದಂತೆ ಡಿಜಿಟಲ್ ಯುಗ ಆರಂಭವಾಗಿದೆ. ಇತ್ತೀಚಿನ ದಿನಗಳಲ್ಲಿ ಡಬಲ್ ಪದವಿ ಪಡೆದುಕೊಂಡಿದ್ದರೂ ಕಂಪ್ಯೂಟರ್ ಜ್ಞಾನ ಇಲ್ಲದಿದ್ದರೆ ಕಷ್ಟವಾಗುತ್ತದೆ. ಸರ್ಕಾರಿ ಹಾಗೂ ಖಾಸಗಿ ಕಂಪನಿಗಳಲ್ಲಿ ಉದ್ಯೋಗ ಪಡೆದುಕೊಳ್ಳಲು ಕಂಪ್ಯೂಟರ್ ತರಬೇತಿ ಅತ್ಯವಶ್ಯಕವಾಗಿದೆ. ಹೀಗಾಗಿ ಯುವ ಜನಾಂಗ ಹೆಚ್ಚು ಕಂಪ್ಯೂಟರ್ ತರಬೇತಿಯನ್ನು ಪಡೆದು ಉದ್ಯೋಗದತ್ತ ಮುಖ ಮಾಡಬೇಕು ಎಂದರು.

    ಶ್ರೀಕಂಪ್ಯೂಟರ್ ತರಬೇತಿ ಕೇಂದ್ರ ಕಳೆದ 10 ವರ್ಷಗಳಿಂದ ಉತ್ತಮ ಸೇವೆಯನ್ನು ಸಲ್ಲಿಸುತ್ತಾ ಬಂದಿದ್ದು, ಸಾವಿರಾರು ವಿದ್ಯಾರ್ಥಿಗಳು ತರಬೇತಿ ಪಡೆದು ತಮ್ಮ ಭವಿಷ್ಯವನ್ನು ರೂಪಿಸಿಕೊಂಡಿದ್ದಾರೆ. ಕಲಿಕೆಯ ಜತೆಗೆ ಕಂಪ್ಯೂಟರ್ ತರಬೇತಿ ಪಡೆದುಕೊಂಡರೆ ಹೆಚ್ಚು ಸಹಕಾರಿಯಾಗುತ್ತದೆ ಈ ನಮ್ಮ ಸಂಸ್ಥೆಯಿಂದ ಜಿಲ್ಲೆಯ ವಿದ್ಯಾರ್ಥಿಗಳಿಗೆ ಗುಣಮಟ್ಟದ ತರಬೇತಿಯನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

    ಕಂಪ್ಯೂಟರ್ ಶಿಕ್ಷಕ ಅರವಿಂದ್ ಸನ್ಮಾನ ಸ್ವೀಕರಿಸಿ ಮಾತನಾಡಿ, ಶ್ರೀ ಕಂಪ್ಯೂಟರ್ ಕಳೆದ 10 ವರ್ಷಗಳಿಂದ ಈ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಸೇವೆ ನೀಡುತ್ತಾ ಬಂದಿದೆ. ಇನ್ನು ಹೆಚ್ಚಿನ ರೀತಿಯಲ್ಲಿ ಪ್ರೋತ್ಸಾಹ ನೀಡಬೇಕೆಂದರು. ಕಂಪ್ಯೂಟರ್ ಶಿಕ್ಷಕ ಅರವಿಂದ್, ಲಕ್ಷ್ಮಿ ವೆಂಕಟೇಶ್, ಸೋನಾಕ್ಷಿ, ಅಪೂರ್ವ, ರಶ್ಮಿ ಹಾಗೂ 60ಕ್ಕೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts