ಸಿನಿಮಾ

ಪುಟ್ಟರಂಗಶೆಟ್ಟಿ ಡಿಸಿಎಂ ಮಾಡಲು ಆಗ್ರಹ

ಚಾಮರಾಜನಗರ: ಸತತ 4ನೇ ಬಾರಿ ಶಾಸಕರಾಗಿ ಜಯಗಳಿಸಿರುವ ರಾಜ್ಯದ ಉಪ್ಪಾರ ಸಮುದಾಯದ ಏಕೈಕ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಜಿಲ್ಲಾ ಉಪ್ಪಾರ ಯುವಕರ ಸಂಘ ಆಗ್ರಹಿಸಿದೆ.

ರಾಜ್ಯದಲ್ಲಿ 40 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಇರುವ ಅತ್ಯಂತ ಹಿಂದುಳಿದ ಉಪ್ಪಾರ ಸಮಾಜದ ಏಕೈಕ ಶಾಸಕ, ರಾಜ್ಯ ಉಪ್ಪಾರ ಸಂಘದ ಅಧ್ಯಕ್ಷರೂ ಆಗಿರುವ ಪುಟ್ಟರಂಗಶೆಟ್ಟಿ ಚಾ.ನಗರ ಕ್ಷೇತ್ರದಲ್ಲಿ ದಾಖಲೆ ನಿರ್ಮಿಸಿದ್ದಾರೆ. ಅವರ ಅಧಿಕಾರದ ಅವಧಿಯಲ್ಲಿ ಶಿಕ್ಷಣ, ಆರೋಗ್ಯ, ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಆಸಕ್ತಿ ವಹಿಸಿದ್ದಾರೆ. ರಾಜ್ಯದ ಹಿಂದುಳಿದ ವರ್ಗದ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವಲ್ಲಿ ಅವರ ಪಾತ್ರವೂ ಅಪಾರವಾಗಿದೆ. ಹಾಗಾಗಿ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಸಂಘದ ಅಧ್ಯಕ್ಷ ಎಂ.ಜಯಕುಮಾರ್, ಉಪಾಧ್ಯಕ್ಷ ಬಿ.ಸ್ವಾಮಿ, ಪ್ರಧಾನ ಕಾರ್ಯದರ್ಶಿ ಸಿ.ಎಸ್.ನಾಗರಾಜ್, ಪದಾಧಿಕಾರಿಗಳಾದ ಮಹದೇವಸ್ವಾಮಿ, ಶಿವಕುಮಾರ್, ಜಯಸಿದ್ದು ಇತರರು ಮಂಗಳವಾರ ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.

Latest Posts

ಲೈಫ್‌ಸ್ಟೈಲ್