More

    ಮೊಬೈಲ್​​ ಬಿಟ್ಟು ಓದಿಕೋ ಎಂದಿದ್ದಕ್ಕೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯಿಂದ ದುಡುಕಿನ ನಿರ್ಧಾರ

    ಚಾಮರಾಜನಗರ: ಮೊಬೈಲ್​ ಬಿಟ್ಟು ಪರೀಕ್ಷೆಗೆ ಓದಿಕೊಳ್ಳುವಂತೆ ಪಾಲಕರು ಗದರಿದ್ದಕ್ಕೆ ಬೇಸತ್ತ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಳ್ಳೇಗಾಲದ ದೇವಾಂಗಪೇಟೆಯಲ್ಲಿ ನಡೆದಿದೆ.

    ಇದನ್ನೂ ಓದಿ: 13 ವರ್ಷದ ಬಾಲಕನನ್ನು ಹೆಣ್ಣು ಮಗುವಿನ ತಂದೆಯಾಗಿ ಮಾಡಿದ ವಿವಾಹಿತೆಗೆ ಸಿಕ್ಕ ಶಿಕ್ಷೆ ಏನು ಗೊತ್ತಾ?

    ದರ್ಶಿನಿ (17) ಮೃತ ವಿದ್ಯಾರ್ಥಿನಿ. ಕರೊನಾ ವೈರಸ್​ ಲಾಕ್​ಡೌನ್​ನಿಂದ ವಿಳಂಬವಾಗಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಮರು ದಿನಾಂಕ ಘೋಷಣೆಯಾಗಿದ್ದು, ಜೂನ್​ 25 ರಿಂದ ಪರೀಕ್ಷೆ ಆರಂಭವಾಗಲಿದೆ.

    ಸದಾ ಮೊಬೈಲ್​ನಲ್ಲಿ ಬಿಜಿಯಾಗಿರುತ್ತಿದ್ದ ದರ್ಶಿನಿಗೆ ಪರೀಕ್ಷಾ ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ ಮೊಬೈಲ್​ ಬಿಟ್ಟು ಓದಿನ ಕಡೆ ಗಮನ ಹರಿಸುವಂತೆ ಪಾಲಕರು ಸ್ವಲ್ಪ ಗದರಿದ್ದಾರೆ. ಇಷ್ಟಕ್ಕೆ ಅಸಮಾಧಾನಗೊಂಡ ದರ್ಶಿನಿ ಮನೆಯಲ್ಲಿ ನೇಣಿಗೆ ಶರಣಾಗುವ ಆತುರದ ನಿರ್ಧಾರ ತೆಗೆದುಕೊಂಡಿದ್ದಾಳೆ.

    ಇದನ್ನೂ ಓದಿ: ಮಹಿಳೆಯ ಶವದ ಜತೆ ಸಾರ್ವಜನಿಕ ಸ್ಥಳದಲ್ಲಿ ಸಂಭೋಗ: ಆರೋಪಿ ಬಂಧಿಸಿದ ಅಧಿಕಾರಿಗಳಿಗೆ ಕಾದಿತ್ತು ಶಾಕ್​!

    ಘಟನಾ ಸ್ಥಳಕ್ಕೆ ಕೊಳ್ಳೇಗಾಲ ಪಟ್ಟಣ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್​)

    ಕಳ್ಳರನ್ನು ಹಿಡಿದ ಪೊಲೀಸರಿಗೆ ಬಂಧನ ಶಿಕ್ಷೆ…!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts