More

    ಬಂಡೀಪುರದಲ್ಲಿ ಹಸಿವಿನಿಂದ ನರಳುತ್ತಲೇ ಪ್ರಾಣಬಿಟ್ಟ 3 ಹುಲಿಮರಿಗಳು!

    ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶ ವ್ಯಾಪ್ತಿಯ ಯಡಿಯಾಲ ಉಪವಿಭಾಗದ ವನ್ಯಜೀವಿ ವಲಯದಲ್ಲಿ ತಾಯಿ ಇಲ್ಲದೆ ಅನಾಥವಾಗಿ ಅಸಿವಿನಿಂದ ನರಳುತ್ತಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮೂರು ಹುಲಿ ಮರಿಗಳೂ ಮೃತಪಟ್ಟಿವೆ.

    ನಿನ್ನೆ(ಮಾ.28) ಮಧ್ಯಾಹ್ನ 1 ತಿಂಗಳ ಮೂರು ಹುಲಿ ಮರಿಗಳು ಪತ್ತೆಯಾಗಿದ್ದವು. ತಾಯಿಹುಲಿ ತನ್ನ ಮರಿಗಳೊಂದಿಗೆ ಸಾಮಾನ್ಯವಾಗಿ ಎರಡರಿಂದ ಮೂರು ವರ್ಷ ಜತೆ ಇರುತ್ತೆ. ಎಲ್ಲೇ ಹೋದರೂ ತನ್ನ ಮರಿಗಳನ್ನು ಸಂರಕ್ಷಣೆ ಮಾಡುತ್ತ ಆಹಾರ ಹುಡುಕುವುದು, ಬೇಟೆಯಾಡುವುದು, ಬೇರೆ ಹುಲಿಗಳ ಆಕ್ರಮಣ‌ದಿಂದ ತಪ್ಪಿಸಿಕೊಳ್ಳುವ ಕಲೆಯನ್ನು ಕಲಿಸುತ್ತದೆ. ಆದರೆ ಯಡಿಯಾಲ ವಲಯದಲ್ಲಿ ತಾಯಿ ಇಲ್ಲದ 3 ಹುಲಿಮರಿಗಳು ನಿತ್ರಾಣ ಸ್ಥಿತಿಯಲ್ಲಿ ಕಂಡುಬಂದಿದ್ದವು.

    ಅದರಲ್ಲಿ ಒಂದು ಹೆಣ್ಣು ಹುಲಿ ಮರಿ ಸ್ಥಳದಲ್ಲೇ ಮೃತಪಟ್ಟಿತ್ತು. ಚಿಂತಾಜನಕ ಸ್ಥಿತಿಯಲ್ಲಿದ್ದ ಉಳಿದ ಎರಡು ಹುಲಿ ಮರಿಗಳನ್ನು ಮೈಸೂರಿನ ಚಾಮರಾಜೇಂದ್ರ ಮೃಗಾಲಯಕ್ಕೆ ರವಾನಿಸಲಾಗಿತ್ತು. ಅಲ್ಲಿ ಹೆಣ್ಣು ಹುಲಿ ಮರಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದೆ. ಉಳಿದಿರುವ ಒಂದು ಗಂಡು ಹುಲಿಮರಿಯ ಆರೋಗ್ಯದ ಮೇಲೆ ನಿಗಾವಹಿಸಲಾಗಿತ್ತಾದರೂ ಆ ಮರಿಯೂ ಬದುಕಲಿಲ್ಲ.

    ನಗ್ನವಾಗಿ ನೋಡಿದ್ರು, ಲೈಂಗಿಕವಾಗಿ ಬಳಸಿಕೊಂಡ್ರು.. ಎಲ್ಲ ಮುಗಿದ ಮೇಲೆ ಮಾಡಬಾರದ್ದನ್ನ ಮಾಡಿದ್ರು… ಎಳೆಎಳೆಯಾಗಿ ಬಿಚ್ಚಿಟ್ಟ ಯುವತಿ

    ಬೆಳಗಾವಿ ಲೋಕಸಭೆ ಉಪಚುನಾವಣೆ: ಡಿಕೆಶಿ ಸಮ್ಮುಖದಲ್ಲೇ ನಾಮಪತ್ರ ಸಲ್ಲಿಸಿದ ಸತೀಶ್ ಜಾರಕಿಹೊಳಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts