More

    ಆಟೋದಿಂದ ಬಿದ್ದು ಮಹಿಳೆ ಸಾವು

    ಯಳಂದೂರು: ತಾಲೂಕಿನ ಹೊನ್ನೂರು ಗ್ರಾಮದಲ್ಲಿ ಶುಕ್ರವಾರ ಅಂತ್ಯಕ್ರಿಯೆ ಮುಗಿಸಿಕೊಂಡು ವಾಪಸಾಗುತ್ತಿದ್ದ ಮಹಿಳೆಯೊಬ್ಬರು ಆಟೋದಿಂದ ಕೆಳಕ್ಕೆ ಬಿದ್ದು ಮೃತಪಟ್ಟಿದ್ದಾರೆ.


    ಹೊನ್ನೂರು ಗ್ರಾಮದ ದೊಡ್ಡಮ್ಮ(49) ಮೃತರು. ಇದೇ ಗ್ರಾಮದಲ್ಲಿ ಮೃತಪಟ್ಟಿದ್ದ ಮಹಿಳೆಯ ಅಂತ್ಯಕ್ರಿಯೆಗೆ ಸ್ಮಶಾನಕ್ಕೆ ತೆರಳಿದ್ದರು. ಅಂತ್ಯಕ್ರಿಯೆ ಮುಗಿಸಿಕೊಂಡು ಆಟೋದಲ್ಲಿ ವಾಪಸಾಗುತ್ತಿದ್ದಾಗ ಚಾಲಕನ ಅಜಾಗರೂಕತೆ ಹಾಗೂ ಅತಿ ವೇಗದಿಂದಾಗಿ ಬದಿಯಲ್ಲಿ ಕುಳಿತ್ತಿದ್ದ ದೊಡ್ಡಮ್ಮ ಕೆಳಕ್ಕೆ ಬಿದ್ದಿದ್ದಾರೆ. ತಲೆಗೆ ತೀವ್ರ ಗಾಯವಾಗಿದ್ದರಿಂದ ಯಳಂದೂರಿನ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts