More

    20ರಂದು ಕೆ.ದೇವರಹಳ್ಳಿಯಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ

    ಯಳಂದೂರು: ತಾಲೂಕಿನ ಕಸಬಾ ಹೋಬಳಿಯ ಕೆ.ದೇವರಹಳ್ಳಿ ಗ್ರಾಮದಲ್ಲಿ ಡಿ.20ರಂದು ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

    ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಇತರ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರ ಕಂದುಕೊರತೆ, ಪೌತಿ ಖಾತೆ, ಪಹಣಿ ತಿದ್ದುಪಡಿ, ಪಿಂಚಣಿ ಸೇರಿ ಇತರ ಸಮಸ್ಯೆಗಳನ್ನು ಆಲಿಸಿ, ಬಗೆಹರಿಸಲು ಡಿ.20ರಂದು ಗ್ರಾಮದ ಸರ್ಕಾರಿ ಶಾಲೆಯ ಆವರಣದಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಾರ್ವಜನಿಕರು ಮನವಿ ಸಲ್ಲಿಸಿ ತಮ್ಮ ಸಮಸ್ಯೆಗಳನ್ನು ಬಗ್ಗೆ ಹರಿಸಿಕೊಳ್ಳಬೇಕೆಂದು ತಹಸೀಲ್ದಾರ್ ಆನಂದಪ್ಪನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts