More

    ಕಸದಿಂದ ಹಣ ಸಂಪಾದನೆ ಮಾಡಿ

    ಚಾಮರಾಜನಗರ: ಸ್ವ-ಸಹಾಯ ಗುಂಪಿನ ಮಹಿಳೆಯರಿಗೆ ಕಸ ಸಂಗ್ರಹದಲ್ಲಿ ತೊಡಗಿಕೊಳ್ಳಿ. ಹಸಿ ಕಸದಿಂದ ಎರೆಹುಳು ಗೊಬ್ಬರ ತಯಾರಿಸಿ ಮಾರಾಟ ಮಾಡಿ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯತ್ರಿ ಸಲಹೆ ನೀಡಿದರು.


    ನಗರದ ಜಿಲ್ಲಾ ಪಂಚಾಯಿತಿನ ಜಿಲ್ಲಾ ಸಂಪನ್ಮೂಲ ಕೇಂದ್ರದಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ (ಎನ್.ಆರ್.ಎಲ್.ಎಂ) ಹಾಗೂ ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟದ ಸ್ವ-ಸಹಾಯ ಗುಂಪಿನ ಮಹಿಳೆಯರಿಗೆ ಘನತ್ಯಾಜ್ಯ ನಿರ್ವಹಣೆ ಕುರಿತು ಎರಡನೇ ಹಂತದ 5 ದಿನಗಳ ತರಬೇತಿ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


    ಗ್ರಾಮ ಪಂಚಾಯಿತಿಗಳಲ್ಲಿ ಸ್ವಚ್ಚತೆ ಕಾಪಾಡುವುದರಿಂದ ಸ್ವಾವಲಂಬಿಗಳಾಗಿ ಬದುಕಲು ಆಧಾರ ಸ್ತಂಭವಾಗಲಿದೆ. ಕಸ ಸಂಗ್ರಹಣೆ ಕಾರ್ಯ ವೈಯಕ್ತಿಯ ಆದಾಯಗಳಿಸುವುದಲ್ಲದೆ ಆರ್ಥಿಕವಾಗಿ ಕುಟುಂಬವು ಸಬಲೀಕರಣವಾಗಲಿದೆ. ಕುಟುಂಬದ ಮಕ್ಕಳ ವಿಧ್ಯಾಭ್ಯಾಸ ಮತ್ತು ಆರ್ಥಿಕ ಅಭಿವೃದ್ಧಿಯಾಗಿ ಸಮಾಜದಲ್ಲಿ ಉತ್ತಮ ಜೀವನ ನಡೆಸಲು ಸಹಾಯವಾಗುತ್ತದೆ ಎಂದರು.


    ಪ್ರತಿ ಗ್ರಾಮ ಪಂಚಾಯಿತಿಗೆ ಇಬ್ಬರು ಸ್ವ-ಸಹಾಯ ಸಂಘದ ಮಹಿಳೆಯರನ್ನು ಆಯ್ಕೆ ಮಾಡಿ ಲಘು ವಾಹನ ಚಾಲನಾ ತರಬೇತಿಯನ್ನು ಜಿಲ್ಲಾ ಪಂಚಾಯಿತಿಯಿಂದ ಕಲ್ಪಿಸಿಕೊಡಲಾಗುವುದು. ಕಸ ಸಂಗ್ರಹಣೆ ಕಾರ್ಯ ಗೌರವಯುತ ಸಾಮಾಜಿಕ ಸೇವೆ. ಸ್ವಚ್ಚತೆ ಸಾಂಕ್ರಾಮಿಕ ರೋಗಗಳಿಂದ ಮುಕ್ತವಾಗಲು ನೆರವಾಗಲಿದೆ ಎಂದು ತಿಳಿಸಬೇಕು. ಇದೇ ವೇಳೆ ತರಬೇತಿ ಪಡೆದ ಸ್ವ-ಸಹಾಯ ಸಂಘದ ಮಹಿಳೆಯರಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ವಿನೋದ್, ವಿಕ್ರಂ, ಎನ್.ಆರ್.ಎಲ್.ಎಂ ಯೋಜನೆಯ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪಿ. ದೀಪಕ್, ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts