28.5 C
Bengaluru
Monday, January 20, 2020

ದಂಡದ ಬದಲು ಹೆಲ್ಮೆಟ್!

Latest News

ವಿಪಕ್ಷ ನಾಯಕ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಲಿ: ಜಿ. ಪರಮೇಶ್ವರ್

ಬೆಂಗಳೂರು: ವಿಪಕ್ಷ ನಾಯಕ ಸ್ಥಾನ ಮತ್ತು ಕಾಂಗ್ರಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಿರಲಿ ಎಂಬ ಅಭಿಪ್ರಾಯವನ್ನು ಹಿರಿಯ ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಗುರುತು ಪತ್ತೆ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಚಿತ್ರ ಸಿಸಿಟಿವಿಯಲ್ಲಿ ಸೆರೆಯಾಗಿದೆ.ವಿಮಾನ ನಿಲ್ದಾಣದಲ್ಲಿರುವ ಸಿಸಿಟಿವಿಯಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ದೃಶ್ಯ ಪತ್ತೆಯಾಗಿದೆ.ಶಂಕಿತ...

ವಸತಿ ಸಹಾಯಧನ ಹೆಚ್ಚಳ ಕೋರಿ ಪ್ರಧಾನಿ ಬಳಿ ರಾಜ್ಯದ ನಿಯೋಗ : ವಸತಿ ಸಚಿವ ವಿ.ಸೋಮಣ್ಣ

ಬೆಂಗಳೂರು: ವಿಧಾನ ಸೌಧ ಕೊಠಡಿಯಲ್ಲಿ ಬೆಂಗಳೂರು ನಗರ ವಸತಿ ಯೋಜನೆ ಕುರಿತು ಸಂಸದ, ಶಾಸಕರ ಸಭೆಯಲ್ಲಿ ಸೋಮವಾರ ಈ ವಿಷಯ ತಿಳಿಸಿದರು.ಕೇಂದ್ರ ಸಹಾಯಧನ...

ಜೂಜುಕೋರರ ಗಡಿಪಾರು ಖಚಿತ: ಎಸ್‌ಪಿ ವಂಶಿಕೃಷ್ಣ ಎಚ್ಚರಿಕೆ

ಪಾವಗಡ: ಮಟ್ಕಾ ಮತ್ತು ಇಸ್ಪೀಟು ಆಡುವವರನ್ನು ಮತ್ತು ಆಡಿಸುವವರನ್ನು ಗಡಿಪಾರು ವಾಡಲು ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ತುಮಕೂರು ಜಿಲ್ಲಾ ಎಸ್‌ಪಿ ಡಾ.ಕೆ.ವಂಶಿಕೃಷ್ಣ...

ವಿಶ್ವಶಾಂತಿಗೆ ಸಂತರ ಮಾರ್ಗದರ್ಶನ ಅಗತ್ಯ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ತುಮಕೂರು: ವಿಶ್ವವೇ ಸಂಕಷ್ಟದ ಸನ್ನಿವೇಶದಲ್ಲಿದ್ದು ಜನರ ಭಯ ತೊಲಗಿಸಲು ಸುಖ-ಶಾಂತಿ ನೆಲೆಸಲು ಸಂತರ ಮಾರ್ಗದರ್ಶನ ಅಗತ್ಯವಿದೆ ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಸಿದ್ಧಗಂಗಾ...

ಚಾಮರಾಜನಗರ: ಹೆಲ್ಮೆಟ್ ರಹಿತ ಸಂಚಾರ ನಡೆಸುವ ದ್ವಿಚಕ್ರ ವಾಹನ ಸವಾರರಿಗೆ ಇನ್ನು ಮುಂದೆ ದಂಡದ ಬದಲು ಹೆಲ್ಮೆಟ್ ನೀಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದ್‌ಕುಮಾರ್ ತಿಳಿಸಿದರು.

ಜಿಲ್ಲೆಯಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಸರ್ಕಾರಿ ಕ್ಯಾಂಟೀನ್‌ನಲ್ಲಿ ಖರೀದಿಸಿದ 1250 ರೂ. ಬೆಲೆ ಬಾಳುವ ಐಎಸ್‌ಐ ಗುರುತಿನ ಹೆಲ್ಮೆಟ್‌ಗಳನ್ನು ಕೇವಲ 750 ರೂ.ಗಳಿಗೆ ವಾಹನ ಸವಾರರ ಒಪ್ಪಿಗೆ ಮೇರೆಗೆ ದಂಡದ ಬದಲು ನೀಡಲಾಗುತ್ತದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

2017ರಲ್ಲಿ 779 ಅಪಘಾತ ಪ್ರಕರಣಗಳು ದಾಖಲಾಗಿದ್ದು, 162 ವಾಹನ ಸವಾರರು ಮೃತಪಟ್ಟಿದ್ದಾರೆ. 2018ರಲ್ಲಿ 812 ಪ್ರಕರಣಗಳಲ್ಲಿ 162 ಜನರು, 2019ರಲ್ಲಿ 815 ಪ್ರಕರಣಗಳಲ್ಲಿ 142 ಜನರು ಮೃತಪಟ್ಟಿದ್ದಾರೆ. ಹೀಗಾಗಿ ದಂಡದ ಬದಲು ಹೆಲ್ಮೆಟ್ ನೀಡಿ ಜೀವ ರಕ್ಷಣೆಯ ಪಾಠ ಹೇಳಿಕೊಡಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ದಂಡ ಪ್ರಯೋಗ ಮಾಡಲಾಗುತ್ತಿದೆ. 2017ರಲ್ಲಿ 1.15 ಕೋಟಿ ರೂ., 2018ರಲ್ಲಿ 1.35 ಕೋಟಿ ರೂ., 2019ರಲ್ಲಿ 97.22 ಲಕ್ಷ ರೂ.ದಂಡ ವಸೂಲಿ ಮಾಡಲಾಗಿದೆ. ಸಂಚಾರ ನಿಯಮ ಉಲ್ಲಂಘನೆಗೆ ಪರಿಷ್ಕೃತ ದಂಡ ಶುಲ್ಕ ನಿಗದಿಪಡಿಸಿದ ದಿನಗಳಿಂದ ಅಕ್ಟೋಬರ್‌ನಲ್ಲಿ 11.23 ಲಕ್ಷ ರೂ.(ಒಟ್ಟು 2831 ಪ್ರಕರಣಗಳು), ನವೆಂಬರ್‌ನಲ್ಲಿ 23.85 ಲಕ್ಷ ರೂ.(ಪ್ರಕರಣ-6013) ದಂಡ ವಸೂಲಿ ಮಾಡಲಾಗಿದೆ ಎಂದು ವಿವರಿಸಿದರು. ಚಾಮರಾಜನಗರ ಡಿವೈಎಸ್ಪಿ ಜೆ.ಮೋಹನ್, ಕೊಳ್ಳೇಗಾಲ ಡಿವೈಎಸ್ಪಿ ನವೀನ್‌ಕುಮಾರ್ ಗೋಷ್ಠಿಯಲ್ಲಿದ್ದರು.

ಜಾಗೃತಿ ಜಾಥಾ: ವಾಹನ ಚಲಾಯಿಸುವಾಗ ಮೊಬೈಲ್ ಬಳಸದಿರಿ, ರಸ್ತೆಯಲ್ಲಿ ಹುಡಗಾಟವಾಡಬೇಡಿ, ಹೆಲ್ಮೆಟ್ ಇಲ್ಲದೆ ವಾಹನ ಚಲಾಯಿಸದಿರಿ ಎಂಬಿತ್ಯಾದಿ ನಾಮಫಲಕಗಳನ್ನು ಹಿಡಿದು ಜಿಲ್ಲಾ ಪೊಲೀಸರು ನಗರದಲ್ಲಿ ಬೈಕ್ ರ‌್ಯಾಲಿ ನಡೆಸಿದರು.
ಸಂಚಾರ ನಿಯಮಗಳನ್ನು ಕಡ್ಡಾಯ ಪಾಲನೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಮಂಗಳವಾರ ಆಯೋಜಿಸಿದ್ದ ಬೈಕ್ ರ‌್ಯಾಲಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದ್‌ಕುಮಾರ್‌ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲಿ ಚಾಲನೆ ನೀಡಿದರು. 25ಕ್ಕೂ ಹೆಚ್ಚು ಪೊಲೀಸರು ನಗರದ ಪ್ರಮುಖ ರಸ್ತೆಗಳಲ್ಲಿ ಜಾಥಾ ನಡೆಸಿದರು.

ಜಿಲ್ಲೆಯಲ್ಲಿ ಯಾವ ಕಾರಣಕ್ಕೆ ಅಪಘಾತ ಸಂಭವಿಸುತ್ತಿದೆ ಎನ್ನುವ ಕಾರಣ ತಿಳಿಯಲು ವಿವಿಧ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ತಂಡವನ್ನು ರಚಿಸಲಾಗಿದೆ. ಅಪಘಾತಕ್ಕೆ ವಾಹನದ ತಾಂತ್ರಿಕ ದೋಷ ಕಾರಣವೇ ಅಥವಾ ಗುಂಡಿ ಬಿದ್ದ ರಸ್ತೆಯಿಂದ ಜೀವ ಹಾನಿ ಉಂಟಾಗಿದೆಯೇ ಎಂಬುದರ ಕುರಿತು ತಂಡದ ಸದಸ್ಯರು ವರದಿ ನೀಡುವರು. ಅದರ ಪ್ರಕಾರ ರಸ್ತೆ ಅವ್ಯವಸ್ಥೆಯಿಂದ ಅಪಘಾತ ಸಂಭವಿಸಿದ್ದರೆ ಸಂಬಂಧ ಪಟ್ಟ ಇಂಜಿನಿಯರ್ ಮೇಲೆ ಪ್ರಕರಣ ದಾಖಲು ಮಾಡಲಾಗುವುದು.
ಎಚ್.ಡಿ.ಆನಂದ್‌ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಚಾಮರಾಜನಗರ.

ವಿಡಿಯೋ ನ್ಯೂಸ್

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...