21 C
Bengaluru
Thursday, January 23, 2020

ವಿದ್ಯಾರ್ಥಿಗಳಿಂದ ಸಹಕಾರ ಕ್ಷೇತ್ರ ಬಲವರ್ಧನೆ

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಚಾಮರಾಜನಗರ: ಸಹಕಾರ ಕ್ಷೇತ್ರ ಬಲವರ್ಧನೆಯಾದರಷ್ಟೇ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷ ಎಂ.ಎಂ.ಪ್ರಭುಸ್ವಾಮಿ ಅಭಿಪ್ರಾಯಪಟ್ಟರು.

ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಸಹಕಾರ ಒಕ್ಕೂಟದ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ, ಜಿಲ್ಲಾ ಸಹಕಾರ ಯೂನಿಯನ್ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಚರ್ಚಾ ಸ್ಪರ್ಧೆ ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು.

ವಿದ್ಯಾರ್ಥಿಗಳಲ್ಲಿ ಸಹಕಾರ ಕ್ಷೇತ್ರದ ಬಗ್ಗೆ ಅರಿವು ಇದ್ದಲ್ಲಿ ಭವಿಷ್ಯದಲ್ಲಿ ಕ್ಷೇತ್ರದ ಬಲವರ್ಧನೆಯಾಗಲಿದೆ. ಜನರ ಜೀವನ ಮಟ್ಟ ಸುಧಾರಣೆಯಾಗಿ, ಆರ್ಥಿಕ ಅಭಿವೃದ್ಧಿ ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಒಕ್ಕೂಟದಿಂದ ವಿದ್ಯಾರ್ಥಿಗಳಿಗೆ ಸಹಕಾರ ಕ್ಷೇತ್ರದ ಬಗ್ಗೆ ತಿಳಿವಳಿಕೆ ಮೂಡಿಸಲು ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.

ಕಬ್ಬಳ್ಳಿ ಪದವಿ ಕಾಲೇಜಿನ ಪ್ರಾಂಶುಪಾಲ ಬಂಗಾರ ನಾಯಕ ಮಾತನಾಡಿ, ಚರ್ಚಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳ ತಿಳಿವಳಿಕೆ ಮಟ್ಟ ಬಹಳ ಕಡಿಮೆ ಇದೆ. ತಾವು ಸಹಕಾರ ಕ್ಷೇತ್ರದ ಬೆಳವಣಿಗೆ ಬಗ್ಗೆ ಹೆಚ್ಚು ತಿಳಿದುಕೊಂಡು ಚರ್ಚಾ ಸ್ಪರ್ಧೆಯಲ್ಲಿ ಭಾಗಹಿಸಬೇಕು ಎಂದು ಸಲಹೆ ನೀಡಿದರು.

ತೀರ್ಪುಗಾರರಾಗಿ ಮೈಸೂರಿನ ಸಹಕಾರ ತರಬೇತಿ ಕೇಂದ್ರದ ಉಪನ್ಯಾಸಕ ಮಹದೇವಪ್ಪ, ಕಬ್ಬಳ್ಳಿ ಪದವಿ ಕಾಲೇಜಿನ ಪ್ರಾಂಶುಪಾಲ ಬಂಗಾರ ನಾಯಕ, ಉಪನ್ಯಾಸಕ ಚಿಕ್ಕಸಿದ್ದಯ್ಯ ಭಾಗವಹಿಸಿದ್ದರು. ಸಹಕಾರ ಯೂನಿಯನ್ ಕಾರ್ಯ ನಿರ್ವಾಹಕಿ ಮನುಜಾ, ಮ್ಯಾನೇಜರ್ ಮಲ್ಲಿಕಾರ್ಜುನ್ ಹಾಗೂ ನೌಕರರು ಇದ್ದರು.

ಸ್ಪರ್ಧೆ ವಿಜೇತರು: ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ‘ಶಾಲಾ-ಕಾಲೇಜುಗಳಲ್ಲಿ ಸಹಕಾರ ಪಠ್ಯ ವಿಷಯವಾದಲ್ಲಿ ಯುವಜನರಲ್ಲಿ ಸಹಕಾರ ಪ್ರಜ್ಞೆಯನ್ನು ಮೂಡಿಸಬಹುದು’ ವಿಷಯ ಕುರಿತ ಚರ್ಚಾ ಸ್ಪರ್ಧೆಯಲ್ಲಿ ಒಟ್ಟು 31 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಚಾಮರಾಜನಗರ ಜೆಎಸ್‌ಎಸ್ ಮಹಿಳಾ ಕಾಲೇಜಿನ ಸಂಗೀತಾ(ಪ್ರಥಮ), ಯಳಂದೂರು ಜೆಎಸ್‌ಎಸ್ ಕಾಲೇಜಿನ ಎನ್.ನೀಲಮ್ಮ (ದ್ವೀತಿಯ), ಪ್ರಶಸ್ತಿ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾದರು. ಮರಿಯಾಲ ಮುರುಘರಾಜೇಂದ್ರಸ್ವಾಮಿ ಪದವಿ ಪೂರ್ವ ಕಾಲೇಜಿನ ರಕ್ಷಿತಾ ತೃತೀಯ ಸ್ಥಾನ ಪಡೆದರು.

ಪ್ರೌಢಶಾಲಾ ವಿಭಾಗದಲ್ಲಿ 21 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಹೆಗ್ಗೋಠಾರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಎಚ್.ಎಸ್. ರೋಜಾ (ಪ್ರಥಮ), ಹರವೆ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಕೆ.ಪ್ರತಿಮಾ (ದ್ವೀತಿಯ), ಸೇಂಟ್ ಫ್ರಾನ್ಸಿಸ್ ಪ್ರೌಢಶಾಲೆಯ ವಿದ್ಯಾರ್ಥಿನಿ ಬಿ.ಎಂ. ಚಂದನಾ (ತೃತೀಯ), ಆಲತ್ತೂರು ಸರ್ಕಾರಿ ಪ್ರೌಢಶಾಲೆಯ ಆರ್.ಮೇಘನಾ ಸಮಾಧಾನಕರ ಬಹುಮಾನ ಪಡೆದುಕೊಂಡರು. ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಮತ್ತು ನಗದು ಬಹುಮಾನ ನೀಡಲಾಯಿತು.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...