More

    ಚಾಮುಂಡೇಶ್ವರಿ ದೇವಿಗೆ ವಿಶೇಷ ಚಿನ್ನದ ಕಿರೀಟ

    ಶಿವಮೊಗ್ಗ: ಶಿವಮೊಗ್ಗದಲ್ಲಿ ಸೆ.26ರಿಂದ ಅ.5ರವರೆಗೆ ನಾಡಹಬ್ಬ ದಸರಾವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು ಈ ಬಾರಿ ಶ್ರೀ ಚಾಮುಂಡೇಶ್ವರಿ ದೇವಿಗೆ ಮೂರವರೆ ಲಕ್ಷ ರೂ. ಮೌಲ್ಯದ 70ರಿಂದ 80 ಗ್ರಾಂನ ಚಿನ್ನದ ಕಿರೀಟವನ್ನು ತೊಡಿಸಲಾಗುವುದು ಎಂದು ಮೇಯರ್ ಸುನೀತಾ ಅಣ್ಣಪ್ಪ ಹೇಳಿದರು.
    ಸೆ.26ರಂದು ಬೆಳಗ್ಗೆ 11ಕ್ಕೆ ಕೋಟೆ ರಸ್ತೆಯ ಶ್ರೀ ಚಂಡಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯ ಪ್ರತಿಷ್ಠಾಪನೆಗೊಳ್ಳಲಿದ್ದು ಅಂದೇ ಚಿನ್ನದ ಕಿರೀಟವನ್ನು ತೊಡಸಲಾಗುವುದು. ವಿಶೇಷವಾಗಿ ದಸರಾ ಸಂದರ್ಭದಲ್ಲಿ ತೊಡಿಸಲು ತೀರ್ಮಾನಿಸಲಾಗಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
    ಕೊನೆ ದಿನವಾದ ಅ.5ರಂದು ಮಧ್ಯಾಹ್ನ 2.30ಕ್ಕೆ ಬೆಳ್ಳಿ ಮಂಟಪದಲ್ಲಿ ಶ್ರೀ ಚಾಮುಂಡೇಶ್ವರೊ ದೇವಿಯ ಬೆಳ್ಳಿ ವಿಗ್ರಹದ ವೈಭವದ ಅಂಬಾರಿ ಮೆರವಣಿಗೆ ನಡೆಯಲಿದೆ. ಶಿವಪ್ಪ ನಾಯಕ ಅರಮನೆ ಆವರಣದಿಂದ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಅಂಬಾರಿ ಮೆರವಣಿಗೆ ಚಾಲನೆ ನೀಡಲಾಗುವುದು. ಈ ಬಾರಿ 70ರಿಂದ 80 ಗ್ರಾಂನ ಚಿನ್ನದ ಕಿರೀಟವನ್ನು ದೇವಿಗೆ ಮಾಡಿಸಲಾಗಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts