ಚಾಮುಂಡಿ ತಪ್ಪಲಲ್ಲಿ ರೇಪ್​ ಪ್ರಕರಣ​: ಮೈಸೂರು ಪೊಲೀಸರ ಮೇಲೆ ಸಿಎಂ ಗರಂ

Bbommai
Published on

ಬೆಂಗಳೂರು: ಮೈಸೂರು ಅತ್ಯಾಚಾರ ಪ್ರಕರಣದಲ್ಲಿ ಇಲ್ಲಿಯವರೆಗೂ ಪೊಲೀಸರು ಆರೋಪಿಗಳನ್ನು ಪತ್ತೆ ಮಾಡದಿರುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಕೆಂಡಾಮಂಡಲವಾಗಿದ್ದಾರೆ, ಈ ಸಂಬಂಧವಾಗಿ ಇಂದು ಬೆಳಿಗ್ಗೆ ಪೊಲೀಸ್ ಉನ್ನತಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ರಾಜ್ಯದಲ್ಲಿ ಅನ್ಯರಾಜ್ಯದ ವಿದ್ಯಾರ್ಥಿನಿಯ ಮೇಲೆ ರೇಪ್ ಆಗಿದೆ. ಇದು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಆದರೆ ಇಲ್ಲಿಯವರೆಗೂ ಪೊಲೀಸರು ಆರೋಪಿಗಳನ್ನು ಪತ್ತೆ ಮಾಡಿಲ್ಲ. ಹೀಗಿರುವಾಗ, ದರೋಡೆ ಸೇರಿದಂತೆ ಮೈಸೂರಿನಲ್ಲಿ ನಡೆದ ಇತ್ತೀಚಿನ ಪ್ರಕರಣಗಳ ಬಗ್ಗೆ ಪ್ರಸ್ತಾಪಿಸಿರುವ ಸಿಎಂ, ಪೊಲೀಸರ ಕರ್ತವ್ಯ ಲೋಪ ಇದೆಯಾ ಎಂಬ ಬಗ್ಗೆ ವರದಿ ನೀಡುವಂತೆ ಉನ್ನತಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಮೈಸೂರು ರೇಪ್ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರುವ ಸಿಎಂ, ಲೋಪ ಎಸಗಿದ ಅಧಿಕಾರಿಗಳನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ ಎಂದು ವಾರ್ನಿಂಗ್ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net