More

    ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

    ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಾನಸ ಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಸಹಯೋಗದೊಂದಿಗೆ ಡಾ. ಫ.ಗು. ಹಳಕಟ್ಟಿ ಅವರ ಜನ್ಮದಿನದ ಪ್ರಯುಕ್ತ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಹಾಗೂ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಜುಲೈ 26 ರಂದು ಬೆಳಗ್ಗೆ 10.30 ಗಂಟೆಗೆ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಬಿಎಂಶ್ರೀ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

    ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ಅವರ ಘನ ಉಪಸ್ಥಿತಿಯಲ್ಲಿ ಕಾರ್ಯಕ್ರಮದ ಉದ್ಘಾಟನೆಯನ್ನು ಸಮಾಜ ಕಲ್ಯಾಣ ಸಚಿವರಾದ ಎಚ್.ಸಿ.ಮಹದೇವಪ್ಪನವರು ನೆರವೇರಿಸಲಿದ್ದು, ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆಯ ಸಚಿವರದಾದ ಕೆ ವೆಂಕಟೇಶ್ ಗೌರವ ಉಪಸ್ಥಿತಿಯಲ್ಲಿ ಭಾಗವಹಿಸುವರು. ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಹರೀಶ್ ಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

    ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಹಾನಗರ ಪಾಲಿಕೆಯ ಮಹಾಪೌರರಾದ ಶಿವಕುಮಾರ್, ಲೋಕಸಭಾ ಸದಸ್ಯರಾದ ಪ್ರತಾಪ್ ಸಿಂಹ, ವಿ.ಶ್ರೀನಿವಾಸ್ ಪ್ರಸಾದ್ ಹಾಗೂ ಸುಮಲತಾ ಅಂಬರೀಶ್ ಅವರು ಭಾಗವಹಿಸಲಿದ್ದಾರೆ.

    ಸಮಾರಂಭದ ಅತಿಥಿಗಳಾಗಿ ವಿಧಾನಸಭಾ ಶಾಸಕರಾದ ತನ್ವೀರ್ ಸೇಠ್, ಜಿ.ಟಿ ದೇವೇಗೌಡ, ಅನಿಲ್ ಕುಮಾರ್.ಸಿ, ರವಿಶಂಕರ್.ಡಿ, ಜಿ.ಡಿ.ಹರೀಶ್ ಗೌಡ, ದರ್ಶನ್ ಧ್ರುವನಾರಾಯಣ, ಟಿ.ಎಸ್ ಶ್ರೀವತ್ಸ, ವಿಧಾನ ಪರಿಷತ್ತಿನ ಶಾಸಕರಾದ ಮರಿತಿಬ್ಬೆಗೌಡ, ಹೆಚ್.ವಿಶ್ವನಾಥ್, ಡಾ.ಡಿ ತಿಮ್ಮಯ್ಯ, ಮಧು ಜಿ ಮಾದೇಗೌಡ, ಸಿ.ಎನ್.ಮಂಜೇಗೌಡ, ಉಪ ಮಹಾಪೌರರಾದ ಡಾ.ಜಿ ರೂಪ ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ವಿ.ಆರ್ ಶೈಲಜಾ ಅವರು ಭಾಗವಹಿಸುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಎಂ.ಡಿ ಸುದರ್ಶನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts