ಸಾಲಬಾಧೆ, ರೈತ ಆತ್ಮಹತ್ಯೆ

ಚನ್ನಗಿರಿ: ತಾಲೂಕಿನ ನೀತಿಗೆರೆ ಗ್ರಾಮದ ರೈತ ದೇವರಾಜ್ (30) ಸಾಲಬಾಧೆ ತಾಳದೆ ಗುರುವಾರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರು ಮೂರು ಎಕರೆ ಜಮೀನು ಹೊಂದಿದ್ದು, ಕೃಷಿ ಚಟುವಟಿಕೆಗಾಗಿ ಪಟ್ಟಣದ ಕೆನರಾ ಬ್ಯಾಂಕ್‌ನಲ್ಲಿ 3 ಲಕ್ಷ ರೂ. ಸಾಲ ಪಡೆದಿದ್ದರು. ಇದರ ಬಾಧೆ ತಾಳದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.