ನೀವು ಲಕ್ಷ ಲಕ್ಷ ಹಣ ಸಂಪಾದಿಸಬೇಕಾ? ಹಾಗಾದರೆ ನೀವಿದನ್ನು ತಪ್ಪದೇ ಅನುಸರಿಸಿ... Money

Money
Published on

Money : ಭಾರತದ ಉತ್ತಮ ವಿದ್ವಾಂಸರಲ್ಲಿ ಚಾಣಕ್ಯರು ಒಬ್ಬರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಚಾಣಕ್ಯ ತಿಳಿಯದ ವಿಷಯವು ಇಲ್ಲ. ಅರ್ಥಶಾಸ್ತ್ರ, ಸಮಾಜ ವಿಜ್ಞಾನ, ರಾಜಕೀಯ, ರಾಜತಾಂತ್ರಿಕತೆ ಮತ್ತು ಮಿಲಿಟರಿ ಸೈನ್ಸ್ ಸೇರಿದಂತೆ ಅನೇಕ ವಿಷಯಗಳ ಮೇಲೆ ಅಗಾಧ ಜ್ಞಾನವನ್ನು ಹೊಂದಿದ್ದಾರೆ. ಪ್ರತಿಯೊಂದು ವಿಷಯದ ಮೇಲೂ ಚಾಣಕ್ಯರ ದೃಷ್ಟಿಕೋನ ತುಂಬಾ ವಿಶಾಲವಾಗಿದೆ. ಈ ಕಾರಣದಿಂದಲೇ ಮಾನವ ಜೀವನದ ಮೇಲೆ ಪರಿಣಾಮ ಬೀರುವ ಸಣ್ಣ ಮತ್ತು ದೊಡ್ಡ ವಿಚಾರಗಳ ಮೇಲೆ ಬಹಳ ಸೂಕ್ಷ್ಮವಾಗಿ ಬೆಳಕು ಚೆಲ್ಲುತ್ತಾರೆ. ಚಾಣಕ್ಯನ ನೀತಿಯು ಒಬ್ಬ ವ್ಯಕ್ತಿಯನ್ನು ಯಶಸ್ವಿಯಾಗಲು ಪ್ರೇರೇಪಿಸುತ್ತದೆ.

ಚಾಣಕ್ಯ ತತ್ವಗಳನ್ನು ಒಳಗೊಂಡಿರುವ ಚಾಣಕ್ಯ ನೀತಿ ಎಂಬ ಪುಸ್ತಕವನ್ನು ಬರೆಯಲಾಗಿದೆ. ಸಂತೋಷದ ಜೀವನದ ಅನೇಕ ರಹಸ್ಯಗಳನ್ನು ಆ ಪುಸ್ತಕದಲ್ಲಿ ತಿಳಿಸಲಾಗಿದೆ. ಅಲ್ಲದೆ, ಮನುಷ್ಯನಾಗಿ ಜನ್ಮ ತಾಳಿದ ವ್ಯಕ್ತಿ ತನ್ನ ಬದುಕನ್ನು ಸುಧಾರಿಸಿಕೊಳ್ಳಲು ಅನುಸರಿಸಬೇಕಾದ ಧರ್ಮ, ಕರ್ಮ, ಪಾಪ ಹಾಗೂ ಪುಣ್ಯಗಳ ಬಗ್ಗೆ ಚಾಣಕ್ಯನ ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ. ಮನುಷ್ಯರಾಗಿ ಹುಟ್ಟಿದ ನಾವು ನಮ್ಮ ಜೀವನದಲ್ಲಿ ಯಶಸ್ವಿಯಾಗಬೇಕು ಎಂದು ಭಾವಿಸುತ್ತೇವೆ. ಅದಕ್ಕೆ ದಾರಿಯನ್ನು ಚಾಣಕ್ಯ ಹಾಕಿಕೊಟ್ಟಿದ್ದಾರೆ. ಆ ದಾರಿಯಲ್ಲಿ ನಡೆದರೆ ಯಶಸ್ಸು ಖಂಡಿತವಾಗಿ ಸಿಗುತ್ತದೆ.

ಅಂದಹಾಗೆ ಚಾಣಕ್ಯನ ಪ್ರಕಾರ ಜೀವನದಲ್ಲಿ ಪ್ರಗತಿ ಸಾಧಿಸಲು ಮತ್ತು ಚಿಕ್ಕ ವಯಸ್ಸಿನಲ್ಲಿ ಲಕ್ಷ ಲಕ್ಷ ಹಣವನ್ನು ಗಳಿಸಲು ನೀವು ಕೆಲವೊಂದು ವಿಷಯಗಳನ್ನು ಅನುಸರಿಸಬೇಕು. ಆ ವಿಷಯಗಳು ಏನು ಎಂಬುವನ್ನು ನಾವೀಗ ತಿಳಿಯೋಣ.

ಜೀವನದಲ್ಲಿ ಯಶಸ್ವಿಯಾಗಬೇಕಾದರೆ, ಮೊದಲು ಬ್ರಾಹ್ಮಿ ಮುಹೂರ್ತದಲ್ಲಿ ಏಳುವ ಅಭ್ಯಾಸವನ್ನು ಬೆಳೆಸಿಕೊಳ್ಳಬೇಕು. ಬೆಳಗ್ಗೆ ಬೇಗ ಏಳುವುದು ಆಧ್ಯಾತ್ಮಿಕವಾಗಿ ಮಾತ್ರವಲ್ಲದೆ ವೈಜ್ಞಾನಿಕವಾಗಿಯೂ ವಿವಿಧ ರೀತಿಯಲ್ಲಿ ಪ್ರಯೋಜನಕಾರಿ ಎಂದು ಸಾಬೀತಾಗಿದೆ. ಮುಂಜಾನೆ ಬೇಗ ಏಳುವ ಅಭ್ಯಾಸವಿರುವವರು ಜೀವನದಲ್ಲಿ ಯಶಸ್ಸನ್ನು ಸಾಧಿಸುತ್ತಾರೆ ಮತ್ತು ತ್ವರಿತವಾಗಿ ಪ್ರಗತಿ ಹೊಂದುತ್ತಾರೆ ಎಂದು ಚಾಣಕ್ಯ ದೃಢವಾಗಿ ಹೇಳುತ್ತಾರೆ.

ಬೆಳಗ್ಗೆ ಬೇಗ ಎದ್ದು ಸ್ನಾನ ಮಾಡಿ ದೇವರ ಪೂಜೆ ಮಾಡಬೇಕು. ಇದನ್ನು ನಿತ್ಯವು ಪಾಲಿಸಿದರೆ ಅವರ ಜೀವನದಲ್ಲಿ ಹೆಚ್ಚು ಸಕಾರಾತ್ಮಕ ಬದಲಾವಣೆಗಳು ಪ್ರಾರಂಭವಾಗುತ್ತವೆ. ಅಂತಹ ಜನರು ಚಿಕ್ಕ ವಯಸ್ಸಿನಲ್ಲಿ ಹೆಚ್ಚು ಹಣವನ್ನು ಗಳಿಸುತ್ತಾರೆ. ಮುಂಜಾನೆ ಸೂರ್ಯನನ್ನು ಪೂಜಿಸುವ ಅಭ್ಯಾಸ ಇರುವವರ ಪ್ರಗತಿಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎನ್ನುತ್ತಾರೆ ಚಾಣಕ್ಯ. ಆ ರೀತಿ ಮಾಡುವುದರಿಂದ ಬ್ರಹ್ಮಾಂಡದ ಶಕ್ತಿಯೊಂದಿಗೆ ನಿಮಗೆ ನಿಕಟ ಸಂಪರ್ಕ ಸೃಷ್ಟಿಯಾಗುತ್ತದೆ. ಅದರಿಂದ ಜೀವನದಲ್ಲಿ ನೀವು ಬಯಸುವ ಎಲ್ಲಾ ವಿಷಯಗಳು ನನಸಾಗಲು ಪ್ರಾರಂಭಿಸುತ್ತವೆ.

ಚಾಣಕ್ಯನ ಪ್ರಕಾರ, ಯಾವ ವ್ಯಕ್ತಿಯು ಜೀವನದಲ್ಲಿ ದೈಹಿಕ ಆರೋಗ್ಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಾನೋ ಆತ ಜೀವನದಲ್ಲಿ ಹೆಚ್ಚಿನ ಯಶಸ್ಸು ಮತ್ತು ಹಣವನ್ನು ಸಾಧಿಸುತ್ತಾನೆ. ಅಲ್ಲದೆ, ಹಣವನ್ನು ಖರ್ಚು ಮಾಡುವ ರೀತಿಯೂ ಒಬ್ಬನನ್ನು ಶ್ರೀಮಂತನನ್ನಾಗಿ ಮತ್ತು ಅದೇ ಸಮಯದಲ್ಲಿ ಬಡವನನ್ನಾಗಿ ಮಾಡುತ್ತದೆ. ತಮ್ಮಲ್ಲಿರುವ ಹಣವನ್ನು ಸರಿಯಾಗಿ ಬಳಸಿಕೊಂಡವರು ಮತ್ತು ಸರಿಯಾದ ಹಣಕಾಸು ನಿರ್ವಹಣೆ ಕೌಶಲ್ಯವನ್ನು ಹೊಂದಿರುವವರು ಶೀಘ್ರವಾಗಿ ಕೋಟಿ ರೂ.ಗಳ ಒಡೆಯರಾಗುತ್ತಾರೆ. ಹಣವನ್ನು ಸರಿಯಾಗಿ ಬಳಸುವುದು ಮತ್ತು ಉಳಿಸುವುದು ಹೇಗೆ ಮತ್ತು ಸರಿಯಾದ ವಲಯಗಳಲ್ಲಿ ಹೂಡಿಕೆ ಮಾಡುವ ಮೂಲಕ ಹಣವನ್ನು ದ್ವಿಗುಣಗೊಳಿಸುವುದು ಹೇಗೆ ಎಂದು ತಿಳಿದಿರುವವರು ಚಿಕ್ಕ ವಯಸ್ಸಿನಲ್ಲಿ ಶ್ರೀಮಂತರಾಗುತ್ತಾರೆ.

ಈ ಅಭ್ಯಾಸಗಳನ್ನು ಬೆಳೆಸಿಕೊಂಡರೆ ಯಾರು ಬೇಕಾದರೂ ಕೋಟಿಗಟ್ಟಲೆ ಸಂಪಾದಿಸಬಹುದು ಎನ್ನುತ್ತಾರೆ ಚಾಣಕ್ಯ.

ವಿಶೇಷ ಸೂಚನೆ: ಮೇಲಿನ ಮಾಹಿತಿ ಸಾಮಾನ್ಯ ಸಾರ್ವಜನಿಕ ಮಾಹಿತಿಯನ್ನು ಆಧರಿಸಿದೆ. ವಿಜಯವಾಣಿ.ನೆಟ್​ ಅದರ ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ. ಯಾವುದೇ ಕ್ರಮಗಳನ್ನು ಅಳವಡಿಸಿಕೊಳ್ಳುವ ಮೊದಲು, ಸಂಬಂಧಿತ ಕ್ಷೇತ್ರದ ತಜ್ಞರನ್ನು ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net